ADVERTISEMENT

ಕೋವಿಡ್‌ ಲಾಕ್‌ಡೌನ್‌: 20 ಜಿಲ್ಲೆಗಳಲ್ಲಷ್ಟೇ ಅಂತರಜಿಲ್ಲಾ ಓಡಾಟ

​ಪ್ರಜಾವಾಣಿ ವಾರ್ತೆ
Published 12 ಜೂನ್ 2021, 19:01 IST
Last Updated 12 ಜೂನ್ 2021, 19:01 IST
ಕಲಬುರ್ಗಿ ನಗರದ ಸರ್ದಾರ್ ವಲ್ಲಭಾಯಿ ಪಟೇಲ್ ವೃತ್ತದಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿರುವುದು–ಸಂಗ್ರಹ ಚಿತ್ರ
ಕಲಬುರ್ಗಿ ನಗರದ ಸರ್ದಾರ್ ವಲ್ಲಭಾಯಿ ಪಟೇಲ್ ವೃತ್ತದಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿರುವುದು–ಸಂಗ್ರಹ ಚಿತ್ರ   

ಬೆಂಗಳೂರು: ‘ಇದೇ 14ರಿಂದ ಲಾಕ್‌ಡೌನ್‌ ನಿರ್ಬಂಧಗಳನ್ನು ಸಡಿಲಿಸಲಾಗುವ 20 ಜಿಲ್ಲೆಗಳಲ್ಲಿ ಅಂತರ್‌ ಜಿಲ್ಲಾ ಓಡಾಟಕ್ಕೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಆದರೆ, ಲಾಕ್‌ಡೌನ್‌ ಮುಂದುವರಿಯಲಿರುವ 11 ಜಿಲ್ಲೆಗಳಲ್ಲಿ ಈ ಅವಕಾಶ ಇಲ್ಲ’ ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್‌ ತಿಳಿಸಿದರು.

ನಿರ್ಬಂಧಗಳನ್ನು ಸಡಿಲಿಸಿದ ಜಿಲ್ಲೆಗಳಿಂದ ಈ 11 ಜಿಲ್ಲೆಗಳ ಮೂಲಕ ಹಾದು ಹೋಗಲು ಅನುಮತಿ ಇರುವುದಿಲ್ಲ. ತುರ್ತು ಸಂದರ್ಭಗಳಲ್ಲಷ್ಟೆ ಸಂಚರಿಸಲು ಅವಕಾಶ ನೀಡಲಾಗುವುದು. ವಾರಾಂತ್ಯದ ದಿನಗಳಲ್ಲಿ ಮತ್ತು ರಾತ್ರಿ ಕರ್ಫ್ಯೂ ಅವಧಿಯಲ್ಲಿ ಎಲ್ಲ ಜಿಲ್ಲೆಗಳಲ್ಲಿ ಸಾರ್ವಜನಿಕ ವಾಹನಗಳ ಓಡಾಟಕ್ಕೆ ನಿರ್ಬಂಧ ಮುಂದುವರಿಯಲಿದೆ’ ಎಂದರು.

‘ಲಾಕ್‌ಡೌನ್‌ ಇರುವ ಜಿಲ್ಲೆಗಳಲ್ಲಿ ಮೇ 7ರ ಮಾರ್ಗಸೂಚಿಯಂತೆ ಅಗತ್ಯ ಸೇವೆ ಒದಗಿಸುವ ಸರಕು ಸಾಗಣೆ ವಾಹನಗಳು ಹಾಗೂ ಸಿಬ್ಬಂದಿಯ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಇರುತ್ತದೆ’ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.