ADVERTISEMENT

karnataka Covid-19 Update: 24 ಗಂಟೆಗಳಲ್ಲಿ 29,438 ಹೊಸ ಪ್ರಕರಣಗಳು

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2021, 15:22 IST
Last Updated 24 ಏಪ್ರಿಲ್ 2021, 15:22 IST
ಬೆಂಗಳೂರು ಬಸ್ ನಿಲ್ದಾಣದಲ್ಲಿ ಕೋವಿಡ್‌ ಪರೀಕ್ಷೆಗೆ ಗಂಟಲು ದ್ರವ ಮಾದರಿ ಸಂಗ್ರಹಿಸುತ್ತಿರುವುದು
ಬೆಂಗಳೂರು ಬಸ್ ನಿಲ್ದಾಣದಲ್ಲಿ ಕೋವಿಡ್‌ ಪರೀಕ್ಷೆಗೆ ಗಂಟಲು ದ್ರವ ಮಾದರಿ ಸಂಗ್ರಹಿಸುತ್ತಿರುವುದು   

ಬೆಂಗಳೂರು: ರಾಜ್ಯದಲ್ಲಿ ಶನಿವಾರ 24 ಗಂಟೆಗಳ ಅಂತರದಲ್ಲಿ ಕೋವಿಡ್–19 ದೃಢಪಟ್ಟ 29,438 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 208 ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲೇ 17,342 ಹೊಸ ಪ್ರಕರಣಗಳು ಪತ್ತೆಯಾಗಿವೆ, 149 ಮಂದಿ ಮೃತಪಟ್ಟಿದ್ದಾರೆ. ತುಮಕೂರಿನಲ್ಲಿ 1,559 ಪ್ರಕರಣಗಳು, ಹಾಸನದಲ್ಲಿ 823 ಪ್ರಕರಣಗಳು, ಕಲಬುರ್ಗಿಯಲ್ಲಿ 791, ಬಳ್ಳಾರಿಯಲ್ಲಿ 731 ಹಾಗೂ ಮಂಡ್ಯದಲ್ಲಿ 688 ಪ್ರಕರಣಗಳು ದಾಖಲಾಗಿವೆ.

ಒಟ್ಟು 13.04 ಲಕ್ಷಕ್ಕೂ ಅಧಿಕ ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, ಈವರೆಗೂ 10.55 ಲಕ್ಷಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ. ಇಂದಿನವರೆಗೂ ಸೋಂಕಿನಿಂದ 14,283 ಮಂದಿ ಸಾವಿಗೀಡಾಗಿರುವುದು ಆರೋಗ್ಯ ಇಲಾಖೆ ಪ್ರಕಟಿಸಿದೆ.

ADVERTISEMENT

ರಾಜ್ಯದಲ್ಲಿ ಪ್ರಸ್ತುತ 2,34,483 ಪ್ರಕರಣಗಳು ಸಕ್ರಿಯವಾಗಿವೆ. ಶನಿವಾರ 9,058 ಮಂದಿ ಗುಣಮುಖರಾಗಿದ್ದಾರೆ. ಐಸಿಯುನಲ್ಲಿ 1,280 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ ಶನಿವಾರದವರೆಗೂ ಒಟ್ಟು 85.63 ಲಕ್ಷ ಡೋಸ್‌ ಕೋವಿಡ್‌ ಲಸಿಕೆ ಹಾಕಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.