ADVERTISEMENT

Covid-19 karnataka update: ಕಳೆದ 24 ಗಂಟೆಗಳಲ್ಲಿ 8,344 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2020, 14:00 IST
Last Updated 18 ಅಕ್ಟೋಬರ್ 2020, 14:00 IST
ಮಾಸ್ಕ್ ಧರಿಸುವ ಕುರಿತು ಜಾಗೃತಿ ಮೂಡಿಸುವ ಚಿತ್ರಗಳನ್ನು ರಚಿಸುತ್ತಿರುವ ಕಲಾವಿದರು –ಸಂಗ್ರಹ ಚಿತ್ರ
ಮಾಸ್ಕ್ ಧರಿಸುವ ಕುರಿತು ಜಾಗೃತಿ ಮೂಡಿಸುವ ಚಿತ್ರಗಳನ್ನು ರಚಿಸುತ್ತಿರುವ ಕಲಾವಿದರು –ಸಂಗ್ರಹ ಚಿತ್ರ   
""

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 7,012 ಪ್ರಕರಣಗಳು ವರದಿಯಾಗಿವೆ.

ಇದೇ ಅವಧಿಯಲ್ಲಿ ಸೋಂಕಿನಿಂದ 51 ಮಂದಿ ಸಾವಿಗೀಡಾಗಿದ್ದಾರೆ ಹಾಗೂ 8,344 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ 1,09,264 ಸಕ್ರಿಯ ಪ್ರಕರಣಗಳಿವೆ. ಒಟ್ಟು 7,65,586 ಪ್ರಕರಣಗಳು ದಾಖಲಾಗಿದ್ದು, ಈವರೆಗೂ 6,45,825 ಮಂದಿ ಗುಣಮುಖರಾಗಿದ್ದಾರೆ ಹಾಗೂ 10,478 ಮಂದಿ ಮೃತಪಟ್ಟಿದ್ದಾರೆ.

ADVERTISEMENT

945 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ಅತಿ ಹೆಚ್ಚು 3,535 ಪ್ರಕರಣಗಳು ದಾಖಲಾಗಿವೆ, 3,845 ಮಂದಿ ಗುಣಮುಖರಾಗಿದ್ದಾರೆ ಹಾಗೂ 25 ಮಂದಿ ಸಾವಿಗೀಡಾಗಿದ್ದಾರೆ.

ಮೈಸೂರಿನಲ್ಲಿ 404 ಪ್ರಕರಣಗಳು, ಮಂಡ್ಯದಲ್ಲಿ 308 ಪ್ರಕರಣಗಳು, ಚಿತ್ರದುರ್ಗದಲ್ಲಿ 226, ಹಾಸನದಲ್ಲಿ 257 ಹೊಸ ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.