ADVERTISEMENT

Covid-19 karnataka update: ಕಳೆದ 24 ಗಂಟೆಗಳಲ್ಲಿ 8,053 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2020, 15:06 IST
Last Updated 1 ನವೆಂಬರ್ 2020, 15:06 IST
ಹುಬ್ಬಳ್ಳಿಯಲ್ಲಿ ಕೋವಿಡ್‌–19 ವಾರಿಯರ್‌ಗಳಿಗೆ ಚಿತ್ರದ ಮುಖೇನ ಧನ್ಯವಾದ ಅರ್ಪಿಸಿದ ಕಲಾವಿದರು–ಸಂಗ್ರಹ ಚಿತ್ರ
ಹುಬ್ಬಳ್ಳಿಯಲ್ಲಿ ಕೋವಿಡ್‌–19 ವಾರಿಯರ್‌ಗಳಿಗೆ ಚಿತ್ರದ ಮುಖೇನ ಧನ್ಯವಾದ ಅರ್ಪಿಸಿದ ಕಲಾವಿದರು–ಸಂಗ್ರಹ ಚಿತ್ರ   
""

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19ನಿಂದ 8,053 ಮಂದಿ ಗುಣಮುಖರಾಗಿದ್ದಾರೆ.

ಇದೇ ಅವಧಿಯಲ್ಲಿ 3,652 ಹೊಸ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 24 ಮಂದಿ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ 50,592 ಸಕ್ರಿಯ ಪ್ರಕರಣಗಳಿವೆ. ಒಟ್ಟು 8,27,064 ಪ್ರಕರಣಗಳು ದಾಖಲಾಗಿದ್ದು, ಈವರೆಗೂ 7,65,261 ಮಂದಿ ಗುಣಮುಖರಾಗಿದ್ದಾರೆ ಹಾಗೂ 11,192 ಮಂದಿ ಮೃತಪಟ್ಟಿದ್ದಾರೆ.

ADVERTISEMENT

ಐಸಿಯುನಲ್ಲಿ 935 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ಅತಿ ಹೆಚ್ಚು 2,167 ಪ್ರಕರಣಗಳು ದಾಖಲಾಗಿದ್ದರೆ, 6,018 ಮಂದಿ ಗುಣಮುಖರಾಗಿದ್ದಾರೆ ಹಾಗೂ 10 ಮಂದಿ ಸಾವಿಗೀಡಾಗಿದ್ದಾರೆ.

ಮೈಸೂರಿನಲ್ಲಿ 147 ಹೊಸ ಪ್ರಕರಣಗಳು, ಹಾಸನ 144 ಪ್ರಕರಣಗಳು, ತುಮಕೂರು 104 ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.