ADVERTISEMENT

Covid-19 karnataka update: ಕಳೆದ 24 ಗಂಟೆಗಳಲ್ಲಿ 2,756 ಹೊಸ ಪ್ರಕರಣಗಳು

​ಪ್ರಜಾವಾಣಿ ವಾರ್ತೆ
Published 3 ನವೆಂಬರ್ 2020, 14:22 IST
Last Updated 3 ನವೆಂಬರ್ 2020, 14:22 IST
ಸೋಂಕು ನಿವಾರಕ ಸಿಂಪಡಿಸುತ್ತಿರುವುದು–ಸಾಂದರ್ಭಿಕ ಚಿತ್ರ
ಸೋಂಕು ನಿವಾರಕ ಸಿಂಪಡಿಸುತ್ತಿರುವುದು–ಸಾಂದರ್ಭಿಕ ಚಿತ್ರ   
""

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19ನಿಂದ 7,140 ಮಂದಿ ಗುಣಮುಖರಾಗಿದ್ದಾರೆ.

ಇದೇ ಅವಧಿಯಲ್ಲಿ ಕೋವಿಡ್‌–19 ದೃಢಪಟ್ಟ 2,756 ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 26 ಮಂದಿ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ 40,395 ಸಕ್ರಿಯ ಪ್ರಕರಣಗಳಿವೆ. ಒಟ್ಟು 8,32,396 ಪ್ರಕರಣಗಳು ದಾಖಲಾಗಿದ್ದು, ಈವರೆಗೂ 7,80,735 ಮಂದಿ ಗುಣಮುಖರಾಗಿದ್ದಾರೆ ಹಾಗೂ 11,247 ಮಂದಿ ಮೃತಪಟ್ಟಿದ್ದಾರೆ.

ADVERTISEMENT

ಐಸಿಯುನಲ್ಲಿ 932 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ಅತಿ ಹೆಚ್ಚು 1,479 ಪ್ರಕರಣಗಳು ದಾಖಲಾಗಿದ್ದರೆ, 4,868 ಮಂದಿ ಗುಣಮುಖರಾಗಿದ್ದಾರೆ ಹಾಗೂ 13 ಮಂದಿ ಸಾವಿಗೀಡಾಗಿದ್ದಾರೆ.

ಮೈಸೂರಿನಲ್ಲಿ 125 ಹೊಸ ಪ್ರಕರಣಗಳು, ಹಾಸನ 115 ಪ್ರಕರಣಗಳು, ದಕ್ಷಿಣ ಕನ್ನಡದಲ್ಲಿ 123 ಪ್ರಕರಣಗಳು, ತುಮಕೂರಿನಲ್ಲಿ 108 ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.