ADVERTISEMENT

Covid-19 karnataka update: ಕಳೆದ 24 ಗಂಟೆಗಳಲ್ಲಿ 8,005 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2020, 14:22 IST
Last Updated 19 ಅಕ್ಟೋಬರ್ 2020, 14:22 IST
ಬೆಂಗಳೂರಿನಲ್ಲಿ ಕೋವಿಡ್‌–19 ಪರೀಕ್ಷೆ–ಸಂಗ್ರಹ ಚಿತ್ರ
ಬೆಂಗಳೂರಿನಲ್ಲಿ ಕೋವಿಡ್‌–19 ಪರೀಕ್ಷೆ–ಸಂಗ್ರಹ ಚಿತ್ರ   
""

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 5,018 ಪ್ರಕರಣಗಳು ವರದಿಯಾಗಿವೆ.

ಇದೇ ಅವಧಿಯಲ್ಲಿ ಸೋಂಕಿನಿಂದ 64 ಮಂದಿ ಸಾವಿಗೀಡಾಗಿದ್ದಾರೆ ಹಾಗೂ 8,005 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ 1,06,214 ಸಕ್ರಿಯ ಪ್ರಕರಣಗಳಿವೆ. ಒಟ್ಟು 7,70,604 ಪ್ರಕರಣಗಳು ದಾಖಲಾಗಿದ್ದು, ಈವರೆಗೂ 6,53,829 ಮಂದಿ ಗುಣಮುಖರಾಗಿದ್ದಾರೆ ಹಾಗೂ 10,542 ಮಂದಿ ಮೃತಪಟ್ಟಿದ್ದಾರೆ.

ADVERTISEMENT

932 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ಅತಿ ಹೆಚ್ಚು 2,481 ಪ್ರಕರಣಗಳು ದಾಖಲಾಗಿವೆ, 2,363 ಮಂದಿ ಗುಣಮುಖರಾಗಿದ್ದಾರೆ ಹಾಗೂ 17 ಮಂದಿ ಸಾವಿಗೀಡಾಗಿದ್ದಾರೆ.

ತುಮಕೂರಿನಲ್ಲಿ 253 ಪ್ರಕರಣಗಳು, ಬಳ್ಳಾರಿಯಲ್ಲಿ 186, ಬೆಂಗಳೂರು ಗ್ರಾಮಾಂತರದಲ್ಲಿ 173 ಪ್ರಕರಣಗಳು, ಚಿಕ್ಕಬಳ್ಳಾಪುರದಲ್ಲಿ 193, ಮೈಸೂರಿನಲ್ಲಿ 151 ಪ್ರಕರಣಗಳು, ಮಂಡ್ಯದಲ್ಲಿ 130 ಪ್ರಕರಣಗಳು, ಚಿತ್ರದುರ್ಗದಲ್ಲಿ 106, ಹಾಸನದಲ್ಲಿ 105 ಹೊಸ ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.