ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್–19ನಿಂದ 8,500 ಮಂದಿ ಗುಣಮುಖರಾಗಿದ್ದಾರೆ.
ಇದೇ ಅವಧಿಯಲ್ಲಿ 6,297 ಹೊಸ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 66 ಮಂದಿ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ 1,03,945 ಸಕ್ರಿಯ ಪ್ರಕರಣಗಳಿವೆ. ಒಟ್ಟು 7,76,901 ಪ್ರಕರಣಗಳು ದಾಖಲಾಗಿದ್ದು, ಈವರೆಗೂ 6,62,329 ಮಂದಿ ಗುಣಮುಖರಾಗಿದ್ದಾರೆ ಹಾಗೂ 10,608 ಮಂದಿ ಮೃತಪಟ್ಟಿದ್ದಾರೆ.
ಐಸಿಯುನಲ್ಲಿ 941 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ಅತಿ ಹೆಚ್ಚು 2,821 ಪ್ರಕರಣಗಳು ದಾಖಲಾಗಿದ್ದರೆ, 2,798 ಮಂದಿ ಗುಣಮುಖರಾಗಿದ್ದಾರೆ ಹಾಗೂ 36 ಮಂದಿ ಸಾವಿಗೀಡಾಗಿದ್ದಾರೆ.
ಮೈಸೂರಿನಲ್ಲಿ 451 ಹೊಸ ಪ್ರಕರಣಗಳು, ತುಮಕೂರಿನಲ್ಲಿ 327 ಪ್ರಕರಣಗಳು, ಬೆಂಗಳೂರು ಗ್ರಾಮಾಂತರದಲ್ಲಿ 319, ಹಾಸನದಲ್ಲಿ 249, ದಾವಣಗೆರೆಯಲ್ಲಿ 206 ಹಾಗೂ ಬಳ್ಳಾರಿಯಲ್ಲಿ 188 ಪ್ರಕರಣಗಳು ವರದಿಯಾಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.