ADVERTISEMENT

Covid-19 karnataka update: ಕಳೆದ 24 ಗಂಟೆಗಳಲ್ಲಿ 8,749 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2020, 14:30 IST
Last Updated 23 ಅಕ್ಟೋಬರ್ 2020, 14:30 IST
ಕೊರೊನಾ ವೈರಸ್ ಸೋಂಕು ಪರೀಕ್ಷೆ–ಸಾಂದರ್ಭಿಕ ಚಿತ್ರ
ಕೊರೊನಾ ವೈರಸ್ ಸೋಂಕು ಪರೀಕ್ಷೆ–ಸಾಂದರ್ಭಿಕ ಚಿತ್ರ   
""

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 5,356 ಹೊಸ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ 51 ಮಂದಿ ಸಾವಿಗೀಡಾಗಿದ್ದಾರೆ.

ಇದೇ ಅವಧಿಯಲ್ಲಿ 8,749 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ 89,483 ಸಕ್ರಿಯ ಪ್ರಕರಣಗಳಿವೆ. ಒಟ್ಟು 7,93,907 ಪ್ರಕರಣಗಳು ದಾಖಲಾಗಿದ್ದು, ಈವರೆಗೂ 6,93,584 ಮಂದಿ ಗುಣಮುಖರಾಗಿದ್ದಾರೆ ಹಾಗೂ 10,821 ಮಂದಿ ಮೃತಪಟ್ಟಿದ್ದಾರೆ.

ADVERTISEMENT

ಐಸಿಯುನಲ್ಲಿ 936 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ಅತಿ ಹೆಚ್ಚು 2,688 ಪ್ರಕರಣಗಳು ದಾಖಲಾಗಿದ್ದರೆ, 4,335 ಮಂದಿ ಗುಣಮುಖರಾಗಿದ್ದಾರೆ ಹಾಗೂ 21 ಮಂದಿ ಸಾವಿಗೀಡಾಗಿದ್ದಾರೆ.

ಮೈಸೂರಿನಲ್ಲಿ 220 ಹೊಸ ಪ್ರಕರಣಗಳು, ದಕ್ಷಿಣ ಕನ್ನಡದಲ್ಲಿ 329, ದಾವಣಗೆರೆಯಲ್ಲಿ 298, ಬೆಂಗಳೂರು ಗ್ರಾಮಾಂತರದಲ್ಲಿ 152 ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.