ADVERTISEMENT

Covid-19 Karnataka Update: ರಾಜ್ಯದಲ್ಲಿ ಕೋವಿಡ್‌ ದೃಢಪಟ್ಟ 468 ಪ್ರಕರಣಗಳು

​ಪ್ರಜಾವಾಣಿ ವಾರ್ತೆ
Published 29 ಜನವರಿ 2021, 14:12 IST
Last Updated 29 ಜನವರಿ 2021, 14:12 IST
ಕೋವಿಡ್‌ ಲಸಿಕೆ ನೀಡಲು ಸಿದ್ಧತೆ–ಸಾಂದರ್ಭಿಕ ಚಿತ್ರ
ಕೋವಿಡ್‌ ಲಸಿಕೆ ನೀಡಲು ಸಿದ್ಧತೆ–ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 468 ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ ಸೋಂಕಿನಿಂದ 607 ಮಂದಿ ಗುಣಮುಖರಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ.

ಒಟ್ಟು 9,38,401 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 9,20,110 ಮಂದಿ ಗುಣಮುಖರಾಗಿದ್ದಾರೆ. ಈವರೆಗೂ ಕೋವಿಡ್‌ನಿಂದ 12,211 ಮಂದಿ ಸಾವಿಗೀಡಾಗಿದ್ದಾರೆ. ಪ್ರಸ್ತುತ 6,061 ಪ್ರಕರಣಗಳು ಸಕ್ರಿಯವಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಿಸಿದೆ.

ಬೆಂಗಳೂರಿನಲ್ಲಿ 264 ಪ್ರಕರಣಗಳು, ದಕ್ಷಿಣ ಕನ್ನಡ 26, ಚಿತ್ರದುರ್ಗದಲ್ಲಿ 20, ಮೈಸೂರು ಮತ್ತು ತುಮಕೂರಿನಲ್ಲಿ ತಲಾ 30 ಪ್ರಕರಣಗಳು ದಾಖಲಾಗಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.