ADVERTISEMENT

ಹಸುಗಳ ಕೆಚ್ಚಲು ಕೊಯ್ದ ಘಟನೆ: ಪ್ರಾಣಿ ಹಿಂಸೆ ಮಾಡುವವರಿಗೆ ಶಿಕ್ಷೆ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 12 ಜನವರಿ 2025, 10:56 IST
Last Updated 12 ಜನವರಿ 2025, 10:56 IST
<div class="paragraphs"><p>ಸಿದ್ದರಾಮಯ್ಯ, ಮುಖ್ಯಮಂತ್ರಿ</p></div>

ಸಿದ್ದರಾಮಯ್ಯ, ಮುಖ್ಯಮಂತ್ರಿ

   

– ಪ್ರಜಾವಾಣಿ ಚಿತ್ರ

ಹಗರಿಬೊಮ್ಮನಹಳ್ಳಿ (ವಿಜಯನಗರ ಜಿಲ್ಲೆ): ಪ್ರಾಣಿ ಹಿಂಸೆ ಮಾಡುವುದು ಅಪರಾಧ, ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ADVERTISEMENT

ಇಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಚಾಮರಾಜಪೇಟೆಯಲ್ಲಿ ಕೆಚ್ಚಲು ಕೊಯ್ದು ಘಟನೆಗೆ ಸಂಬಂಧಿಸಿದಂತೆ , ತಪ್ಪಿತಸ್ಥರ ಮಾಹಿತಿ ದೊರೆತಿಲ್ಲ. ಪೊಲೀಸ್ ಆಯುಕ್ತರು ತಪ್ಪಿತಸ್ಥರನ್ನು ಪತ್ತೆ ಹಚ್ಚಿ , ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ. ಹಿಂದೂ ಸಂಘಟನೆಗಳ ಪ್ರತಿಭಟನೆ ರಾಜಕೀಯ ಪ್ರೇರಿತವಾಗಿದೆ ಎಂದರು.

ಜಾತಿಗಣತಿ ವರದಿ ಜಾರಿ- ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಜಾತಿಗಣತಿ ವರದಿಗೆ ವಿರೋಧ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜಾತಿ ಗಣತಿ ವರದಿಗಳ ಪರ, ವಿರೋಧ ಅಭಿಪ್ರಾಯಗಳು ವ್ಯಕ್ತವಾಗುವುದು ಸಹಜ. 160 ಕೋಟಿ ವೆಚ್ಚದಲ್ಲಿ ಸಿದ್ದಪಡಿಸಲಾದ ವರದಿಯನ್ನು ಸ್ವೀಕರಿಸಲಾಗಿದ್ದು, ವರದಿಯ ಜಾರಿಯ ಬಗ್ಗೆ ತೀರ್ಮಾನ ಕೈಗೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.