ADVERTISEMENT

ಗೋಹತ್ಯೆ ನಿಷೇಧ: ರಾಜ್ಯದಲ್ಲಿ ಸುಗ್ರೀವಾಜ್ಞೆಗೆ ಅಂಕಿತ

​ಪ್ರಜಾವಾಣಿ ವಾರ್ತೆ
Published 5 ಜನವರಿ 2021, 19:50 IST
Last Updated 5 ಜನವರಿ 2021, 19:50 IST
ಜಾನುವಾರು–ಸಾಂದರ್ಭಿಕ ಚಿತ್ರ
ಜಾನುವಾರು–ಸಾಂದರ್ಭಿಕ ಚಿತ್ರ   

ಬೆಂಗಳೂರು: ಹಸು ಮತ್ತು ಎತ್ತುಗಳ ವಧೆಯನ್ನು ಸಂಪೂರ್ಣವಾಗಿ ನಿಷೇಧಿಸುವ ಗೋಹತ್ಯೆ ನಿಷೇಧ ಸುಗ್ರೀವಾಜ್ಞೆ–2020ಕ್ಕೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಮಂಗಳವಾರ ಅಂಕಿತ ಹಾಕಿದ್ದಾರೆ.

ಉತ್ತರ ಪ್ರದೇಶದ ಮಾದರಿಯಲ್ಲಿ ಸಂಪೂರ್ಣವಾಗಿ ಗೋಹತ್ಯೆ ನಿಷೇಧಿಸುವ ಮಸೂದೆಯನ್ನು ವಿಧಾನ ಮಂಡಲದ ಕಳೆದ ಅಧಿವೇಶನದಲ್ಲಿ ಮಂಡಿಸಲಾಗಿತ್ತು. ವಿಧಾನಸಭೆಯಲ್ಲಿ ಮಸೂದೆಗೆ ಒಪ್ಪಿಗೆ ದೊರಕಿತ್ತು. ಆದರೆ, ವಿಧಾನ ಪರಿಷತ್‌ನಲ್ಲಿ ಮಸೂದೆ ಮಂಡನೆಗೂ ಅವಕಾಶ ಸಿಕ್ಕಿರಲಿಲ್ಲ.

ಸಂಪುಟ ಸಭೆಯ ನಿರ್ಣಯದಂತೆ ಗೋಹತ್ಯೆ ನಿಷೇಧಕ್ಕೆ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯಪಾಲರಿಗೆ ಪ್ರಸ್ತಾವ ಸಲ್ಲಿಸಲಾಗಿತ್ತು. ಸುಗ್ರೀವಾಜ್ಞೆಗೆ ರಾಜ್ಯಪಾಲರ ಒಪ್ಪಿಗೆ ದೊರಕಿರುವುದರಿಂದ ಮಂಗಳವಾರದಿಂದಲೇ ಗೋಹತ್ಯೆ ನಿಷೇಧಕ್ಕೆ ತರಲಾದ ಹೊಸ ತಿದ್ದುಪಡಿಗಳು ಜಾರಿಗೆ ಬಂದಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.