ADVERTISEMENT

ಬಿಜೆಪಿ ಕಚೇರಿಯಲ್ಲಿ ಗೋ ಪೂಜೆ ನೆರವೇರಿಸಿದ ಸಚಿವ ಎಸ್‌ಟಿ ಸೋಮಶೇಖರ್ 

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2020, 6:40 IST
Last Updated 10 ಡಿಸೆಂಬರ್ 2020, 6:40 IST
   

ಬೆಂಗಳೂರು: ಕರ್ನಾಟಕ ಗೋಹತ್ಯೆ ನಿಯಂತ್ರಣ ಮತ್ತು ಜಾನುವಾರು ಸಂರಕ್ಷಣೆ ವಿಧೇಯಕ 2020ಕ್ಕೆ ಬುಧವಾರ ವಿಧಾನಸಭೆಯಲ್ಲಿ ಅಂಗೀಕಾರ ದೊರೆತ ಹಿನ್ನೆಲೆಯಲ್ಲಿ ಇಂದು ಮಲ್ಲೇಶ್ವರದಲ್ಲಿರುವ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಗೋ ಪೂಜೆಯನ್ನು ನೆರವೇರಿಸಲಾಗಿದ್ದು, ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಟಿ. ಸೋಮಶೇಖರ್ ಅವರು ಗೋ ಪೂಜೆ ಮಾಡುವ ಮೂಲಕ ವಿಧೇಯಕವನ್ನು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಆಯಾ ಜಿಲ್ಲೆಗಳ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು, ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಪಕ್ಷದ ಕಚೇರಿಗಳಲ್ಲಿ ಗೋಪೂಜೆಗಳನ್ನು ಇಂದು ರಾಜ್ಯಾದ್ಯಂತ ನೆರವೇರಿಸುತ್ತಿದ್ದಾರೆ. ಇದೊಂದು ಐತಿಹಾಸಿಕ ನಿರ್ಣಯವಾಗಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.

ಈ ವಿಧೇಯಕಕ್ಕೆ ಕಾಂಗ್ರೆಸ್ ನವರು ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾಂಗ್ರೆಸ್ ನವರದ್ದು ವಿರೋಧ ಮಾಡುವುದೇ ಕೆಲಸ. ಅವರು ವಿರೋಧ ಪಕ್ಷವಾಗಿರುವುದರಿಂದ ಪ್ರತಿ ಒಳ್ಳೆಯ ಕೆಲಸಕ್ಕೂ ವಿರೋಧ ವ್ಯಕ್ತಪಡಿಸುತ್ತಾರೆ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.