ADVERTISEMENT

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿಯಾದ ಸಿ.ಪಿ. ಯೋಗೇಶ್ವರ್‌

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2020, 15:05 IST
Last Updated 17 ಆಗಸ್ಟ್ 2020, 15:05 IST
ಸಿ.ಪಿ. ಯೋಗೇಶ್ವರ್‌ ಹಾಗೂ ಸಚಿವ ರಮೇಶ್ ಜಾರಕಿಹೊಳಿ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದರು
ಸಿ.ಪಿ. ಯೋಗೇಶ್ವರ್‌ ಹಾಗೂ ಸಚಿವ ರಮೇಶ್ ಜಾರಕಿಹೊಳಿ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದರು   

ರಾಮನಗರ: ವಿಧಾನ ಪರಿಷತ್‌ ಸದಸ್ಯರಾದ ಬೆನ್ನಲ್ಲೇ ಸಿ.ಪಿ. ಯೋಗೇಶ್ವರ್‍ ದೆಹಲಿಯತ್ತ ಮುಖ ಮಾಡಿದ್ದು, ಸೋಮವಾರ ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಅವರೊಂದಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಆರಂಭದಿಂದಲೂ ಯೋಗೇಶ್ವರ್‌ ಸಚಿವ ಸ್ಥಾನದ ಆಕಾಂಕ್ಷಿ ಆಗಿದ್ದಾರೆ. ಹೀಗಾಗಿ ಈ ಬಾರಿ ಮಂತ್ರಿಗಿರಿಗಾಗಿ ಪಕ್ಷದ ಅಧ್ಯಕ್ಷರಿಗೆ ಬೇಡಿಕೆ ಸಲ್ಲಿಸಲೆಂದೇ ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ. ಇದರೊಟ್ಟಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ರ ರಾಜಕೀಯ ವೈರಿ ರಮೇಶ್‌ ಸಹ ಜೊತೆಗೂಡಿರುವುದು ಹಲವು ಕುತೂಹಲಗಳಿಗೆ ಕಾರಣವಾಗಿದೆ. ಡಿ.ಕೆ. ಸಹೋದರರ ವಿರುದ್ಧದ ಕೆಲವು ಸಾಕ್ಷ್ಯಗಳನ್ನೂ ಅವರೂ ಕೊಂಡೊಯ್ದಿದ್ದಾರೆ ಎಂದು ಸುದ್ದಿ ಹಬ್ಬಿದೆ. ಈ ಕುರಿತು ಪ್ರತಿಕ್ರಿಯೆಗೆ ಯೋಗೇಶ್ವರ್‌ ದೂರವಾಣಿ ಸಂಪರ್ಕಕ್ಕೆ ಲಭ್ಯ ಆಗಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT