ADVERTISEMENT

ಸಿ.ಡಿ ಹಿಂದೆ ಕನಕಪುರ, ಬೆಳಗಾವಿ ಕಡೆಯವರ ರಾಜಕೀಯ ಷಡ್ಯಂತ್ರ: ಯೋಗೇಶ್ವರ್‌

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2021, 7:58 IST
Last Updated 6 ಮಾರ್ಚ್ 2021, 7:58 IST
ಸಚಿವ ಸಿ.ಪಿ. ಯೋಗೇಶ್ವರ್
ಸಚಿವ ಸಿ.ಪಿ. ಯೋಗೇಶ್ವರ್   

ಬೆಂಗಳೂರು: ‘ರಮೇಶ್‌ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಸಿ.ಡಿ ಬಿಡುಗಡೆಯ ಹಿಂದೆ ಕನಕಪುರ ಮತ್ತು ಬೆಳಗಾವಿ ಕಡೆಯವರ ರಾಜಕೀಯ ಷಡ್ಯಂತ್ರವಿದೆ’ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಆರೋಪಿಸಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಕನಕಪುರ, ಬೆಳಗಾವಿಯವರೇ ವಿಡಿಯೊ ಬರಲು ಕಾರಣ. ಮುಂದಿನ ದಿನಗಳಲ್ಲಿ ಅವರು ಅನುಭವಿಸುತ್ತಾರೆ’ ಎಂದರು.

‘ಆರು‌ ಜನ ಸಚಿವರು ಕೋರ್ಟ್‌ಗೆ ಯಾಕೆ ಹೋಗಿದ್ದಾರೊ ಗೊತ್ತಿಲ್ಲ. ಅವರ ವೈಯಕ್ತಿಕ ರಕ್ಷಣೆಗೆ ಕೋರ್ಟ್ ಮೊರೆ ಹೋಗಿರಬಹುದು. ಯಾರು ಕೋರ್ಟ್ ಮೊರೆ ಹೋಗಿದ್ದಾರೋ ಅವರನ್ನೇ ಕೇಳಿ’ ಎಂದರು.

ADVERTISEMENT

‘ಮೈತ್ರಿ ಸರ್ಕಾರ ಬೀಳಿಸಿದ ಕಾರಣ ಕೆಲವರು ಷಡ್ಯಂತ್ರ ನಡೆಸಿದ್ದಾರೆ. ರಮೇಶ್ ಜಾರಕಿಹೊಳಿ‌ ಪ್ರಕರಣದಲ್ಲಿ ರಾಜಕೀಯ ಪಿತೂರಿ ನಡೆದಿದೆ. ಈ ವಿಚಾರದಲ್ಲಿ ನನ್ನನ್ನು ಎಳೆಯಬಿಡಿ’ ಎಂದೂ ಮನವಿ ಮಾಡಿದರು.

ಇವನ್ನೂ ಓದಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.