ADVERTISEMENT

ಐಪಿಎಲ್ ಬೆಟ್ಟಿಂಗ್: ₹ 6 ಲಕ್ಷ ವಶ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2020, 23:24 IST
Last Updated 23 ಸೆಪ್ಟೆಂಬರ್ 2020, 23:24 IST

ಬೆಂಗಳೂರು: ಐಪಿಎಲ್ ಕ್ರಿಕೆಟ್ ಪಂದ್ಯಗಳ ವೇಳೆ ಬೆಟ್ಟಿಂಗ್ ನಡೆಸುತ್ತಿದ್ದ ಆರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು
₹ 6 ಲಕ್ಷ ನಗದು ಹಾಗೂ 6 ಮೊಬೈಲ್ ವಶಪಡಿಸಿಕೊಂಡಿದ್ದಾರೆ.

ಬಾಣಸವಾಡಿ ಠಾಣೆ ವ್ಯಾಪ್ತಿಯಲ್ಲಿ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಮಲ್ಲೇಶ್ವರ ಹಾಗೂ ಬಾಣಸವಾಡಿಯಲ್ಲಿ ಬೆಟ್ಟಿಂಗ್ ನಡೆಸುತ್ತಿದ್ದರು.

‘ಪಂದ್ಯ ನಡೆಯುವಾಗ ಪ್ರತಿ ಬಾಲ್, ಓವರ್ ಹಾಗೂ ಪಂದ್ಯದ ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಆರೋಪಿಗಳು ಹಲವರಿಂದ ಹಣ ಕಟ್ಟಿಸಿಕೊಳ್ಳುತ್ತಿದ್ದರು. ಮೊಬೈಲ್ ಹಾಗೂ ಆ್ಯಪ್ ಮೂಲಕ ಬೆಟ್ಟಿಂಗ್ ನಡೆಸುತ್ತಿದ್ದರು’ ಎಂದು ಸಿಸಿಬಿ ಅಧಿಕಾರಿಯೊಬ್ಬರು ತಿಳಿಸಿದರು.

ADVERTISEMENT

‘ಆರೋಪಿಗಳ ವಿರುದ್ಧ ಬಾಣಸವಾಡಿ ಹಾಗೂ ಮಲ್ಲೇಶ್ವರದಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಐಪಿಎಲ್ ಪಂದ್ಯಗಳು ಮುಗಿಯುವವರೆಗೆ ದಾಳಿಗಳು ನಡೆಯಲಿವೆ’ ಎಂದೂ ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.