ADVERTISEMENT

ಅತ್ಯಾಚಾರ: ಜೀವಾವಧಿ, ದಂಡ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2020, 12:13 IST
Last Updated 13 ಮಾರ್ಚ್ 2020, 12:13 IST

ಕಲಬುರ್ಗಿ: ಚಿಂಚೋಳಿ ತಾಲ್ಲೂಕಿನಲ್ಲಿ ಬಾಲಕಿಯರ ಮೇಲೆ ನಡೆದ ಎರಡು ಪ್ರತ್ಯೇಕ ಅತ್ಯಾಚಾರ ಪ್ರಕರಣಗಳಲ್ಲಿ, ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ ₹ 1 ಲಕ್ಷ ದಂಡ ವಿಧಿಸಿ,ಇಲ್ಲಿನ 2ನೇ ವಿಶೇಷ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ತೀರ್ಪು ನೀಡಿದೆ.

ಪ್ರಶಾಂತ ಚಂದ್ರಶಾ ಜಮಾದಾರ ಶಿಕ್ಷೆಗೆ ಒಳಗಾಗಿದ್ದಾನೆ. ಈ ಬಗ್ಗೆ ಸಿಪಿಐ ಎಚ್.ಎಂ. ಇಂಗಳೇಶ್ವರ ಅವರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು.‌

ಪ್ರಕರಣದ ವಿಚಾರಣೆ ನಡೆಸಿದ2ನೇ ವಿಶೇಷ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶರಾದ ಎಸ್‌. ಗೋಪಾಲಪ್ಪ ಅವರು ಪೋಕ್ಸೊ ಅಡಿ ಅಪರಾಧಿಗೆ ಶಿಕ್ಷೆ ವಿಧಿಸಿದ್ದಾರೆ. ‌ಅಲ್ಲದೇ, ನೊಂದ ಬಾಲಕಿಗೆ ಜಿಲ್ಲಾ ಕಾನೂನು ಸೇವಾ ಸಮಿತಿಯಿಂದ ₹ 5 ಲಕ್ಷ ಪರಿಹಾರ ನೀಡುವಂತೆಯೂ ಆದೇಶದಲ್ಲಿ ತಿಳಿಸಿದ್ದಾರೆ.

ADVERTISEMENT

ಇನ್ನೊಂದು ಪ್ರಕರಣದಲ್ಲಿ; ಚಿಂಚೋಳಿ ತಾಲ್ಲೂಕಿನ ತಾಂಡಾವೊಂದರಲ್ಲಿ 2017ರ ಜನವರಿಯಲ್ಲಿ17ನೇ ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಮತ್ತೊಬ್ಬ ಅಪರಾಧಿಗೂ ಜೀವಾವಧಿ ಶಿಕ್ಷೆ ಹಾಗೂ ದಂಡ
ವಿಧಿಸಿದ್ದಾರೆ.

ಈ ಎರಡೂ ಪ್ರಕರಣಗಳಲ್ಲಿಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ (ಪೋಕ್ಸೊ) ಎಲ್‌.ವಿ. ಚಟ್ನಾಳಕರ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.