ಬೆಂಗಳೂರು: ನೈಜೀರಿಯಾದ ಇಬ್ಬರು ಡ್ರಗ್ ಪೆಡ್ಲರ್‌ಗಳನ್ನು ಸಿಸಿಬಿ ಪೊಲೀಸರು ರಾಮಮೂರ್ತಿನಗರ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಿದ್ದಾರೆ.
ನೈಜೀರಿಯಾ ಪ್ರಜೆಗಳಾದ ವಿನ್ಸೆಂಟ್ ಎಜಿಮೋಫೋರ್ (37) ಹಾಗೂ ಜಾನ್ ಎಗ್ವಾತು ಚಿನೆಡೂ (28) ಬಂಧಿತರು.
ಆರೋಪಿಗಳಿಂದ ₹15 ಲಕ್ಷ ಮೌಲ್ಯದ ಮಾದಕ ವಸ್ತುಗಳಾದ ಎಕ್ಸ್‌ಟೆಸಿ ಹಾಗೂ ಕೊಕೇನ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
‘ನೈಜೀರಿಯಾದಿಂದ ಬಂದಿದ್ದ ಇವರಿಬ್ಬರ ವೀಸಾ ಅವಧಿ ಮುಗಿದಿದ್ದು, ದೇಶದಲ್ಲಿ ಅಕ್ರಮವಾಗಿ ನೆಲೆಸಿದ್ದರು. ಇವರು ಡ್ರಗ್ಸ್ ದಂಧೆ ನಡೆಸುತ್ತಿರುವ ಕುರಿತು ಸಿಸಿಬಿಗೆ ಮಾಹಿತಿ ಸಿಕ್ಕಿತ್ತು. ಇದರ ಆಧಾರದಲ್ಲಿ ಕಾರ್ಯಾಚರಣೆ ನಡೆಸಿ, ಇಬ್ಬರನ್ನೂ ಬಂಧಿಸಲಾಗಿದೆ. ತನಿಖೆ ಮುಂದುವರಿದಿದೆ’ ಎಂದು ಸಿಸಿಬಿ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.