ಉಳ್ಳಾಲ: ನಾಪತ್ತೆಯಾಗಿದ್ದ 13 ವರ್ಷದ ಬಾಲಕನ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದ್ದು, ಮೃತದೇಹವು ಉಳ್ಳಾಲ ಠಾಣಾ ವ್ಯಾಪ್ತಿಯ ಕೆ.ಸಿ ರೋಡು ಬಳಿ ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ.
ಕೆ.ಸಿ ರೋಡ್ ನಿವಾಸಿ ಹನೀಫ್ ಎಂಬವರ ಪುತ್ರ ಹಕೀಫ್ (13) ಮೃತ ಬಾಲಕ. ಅವರ ಮನೆಯಿಂದ 3 ಕಿಲೊ ಮೀಟರ್ ದೂರದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಶನಿವಾರ ಸಂಜೆಯಿಂದ ನಾಪತ್ತೆಯಾಗಿದ್ದ ಹಕೀಫ್ ಕುರಿತು ಹೆತ್ತವರು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.
ಪಬ್ ಜಿ ವಿಚಾರಕ್ಕೆ ಸಂಬಂಧಿಸಿ ಬಾಲಕರ ನಡುವಿನ ಜಗಳ ಕೊಲೆಗೆ ಕಾರಣ ಆಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.