ADVERTISEMENT

‘ಚುನಾವಣೆ: ಹಿಂದುಳಿದ ವರ್ಗಗಳಿಗೆ ಅನ್ಯಾಯ’

rajakiya news

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2019, 20:21 IST
Last Updated 4 ಏಪ್ರಿಲ್ 2019, 20:21 IST

ಬೆಂಗಳೂರು: ‘ಈ ಬಾರಿಯ ಲೋಕಸಭಾ ಚುನಾವಣೆಯ ಅಭ್ಯರ್ಥಿಗಳ ಆಯ್ಕೆಯಲ್ಲಿ ರಾಜಕೀಯ ಪಕ್ಷಗಳು, ಹಿಂದುಳಿದ ವರ್ಗಗಳಿಗೆ ಪ್ರಾತಿನಿಧ್ಯ ನೀಡಿಲ್ಲ. ಈ ಧೋರಣೆ ಖಂಡನೀಯ’ ಎಂದು ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ಹಾಗೂ ಒಂದು ಪ್ರಾದೇಶಿಕ ಪಕ್ಷವಿದೆ. ಅವುಗಳ ಅಭ್ಯರ್ಥಿಗಳ ಪಟ್ಟಿಯನ್ನು ನೋಡಿದರೆ ದಿಗ್ಭ್ರಮೆ ಆಗುತ್ತದೆ’ ಎಂದರು.

‘ಅತ್ಯಂತ ದೊಡ್ಡ ಪಕ್ಷ ಎಂದು ಹೇಳಿಕೊಳ್ಳುವ ಬಿಜೆಪಿಯ 27 ಅಭ್ಯರ್ಥಿಗಳಲ್ಲಿ ಹಿಂದುಳಿದ ವರ್ಗಕ್ಕೆ ಸೇರಿದ ಪ್ರವರ್ಗ–1 ಹಾಗೂ ಪ್ರವರ್ಗ–2ರ ಒಬ್ಬ ಅಭ್ಯರ್ಥಿಯೂ ಇಲ್ಲ. ಇದು ದುರಂತದ ಸಂಗತಿ. ಚುನಾವಣೆಗೆ ಯಾವುದೇ ಪಕ್ಷದಿಂದ ಅಥವಾ ಸ್ವತಂತ್ರವಾಗಿ ಸ್ಪರ್ಧಿಸಿರುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳನ್ನು ಗೆಲ್ಲಿಸಲು ಸಮುದಾಯದವರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು’ ಎಂದು ಕೋರಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.