ADVERTISEMENT

ವಾಹನ ಜಪ್ತಿ; ಠಾಣೆಗೆ ಬಾರದ ಮಾಲೀಕರು

​ಪ್ರಜಾವಾಣಿ ವಾರ್ತೆ
Published 17 ಮೇ 2020, 3:06 IST
Last Updated 17 ಮೇ 2020, 3:06 IST
ಲಾಕ್‌ಡೌನ್‌ ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ ವಾಹನಗಳನ್ನು ಜಪ್ತಿ ಮಾಡುತ್ತಿರುವ ಪೊಲೀಸರು
ಲಾಕ್‌ಡೌನ್‌ ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ ವಾಹನಗಳನ್ನು ಜಪ್ತಿ ಮಾಡುತ್ತಿರುವ ಪೊಲೀಸರು    

ಬೆಂಗಳೂರು:ಲಾಕ್‌ಡೌನ್ ಹಾಗೂ ನಿಷೇಧಾಜ್ಞೆ ಜಾರಿಯಲ್ಲಿದ್ದ ವೇಳೆಯಲ್ಲಿ ಜಪ್ತಿ ಮಾಡಲಾದ ವಾಹನಗಳನ್ನು ಬಿಡಿಸಿಕೊಳ್ಳಲು ಮಾಲೀಕರು ಠಾಣೆಗೆ ಬರುತ್ತಿಲ್ಲ. ಠಾಣೆ ಎದುರೇ ವಾಹನಗಳನ್ನು ನಿಲ್ಲಿಸಲಾಗಿದೆ.

‘47 ಸಾವಿರಕ್ಕೂ ಹೆಚ್ಚು ವಾಹನಗಳನ್ನು ಜಪ್ತಿ ಮಾಡಲಾಗಿತ್ತು. 10 ಸಾವಿರ ವಾಹನಗಳು ಉಳಿದುಕೊಂಡಿವೆ. ಮಾಲೀಕರು ಯಾರು ಎಂಬುದು ಗೊತ್ತಾಗುತ್ತಿಲ್ಲ’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದರು.

ಭಾಸ್ಕರ್ ರಾವ್ ಸೂಚನೆ

ADVERTISEMENT

ಕೊರೊನಾ ಸೋಂಕು ಹರಡುವುದನ್ನು ತಡೆಯಲೆಂದು ಲಾಕ್‌ಡೌನ್ ಘೋಷಿಸಿದ್ದ ಸಂದರ್ಭದಲ್ಲಿ ಮುಟ್ಟುಗೋಲು ಹಾಕಿಕೊಂಡಿದ್ದ ವಾಹನಗಳನ್ನು ಅವುಗಳ ಮಾಲೀಕರಿಗೆ ಮರಳಿಸಲಾಗುವುದು ಎಂದು ಪೊಲೀಸ್ ಆಯುಕ್ತ ಭಾಸ್ಕರ್‌ ರಾವ್ ಈ ಹಿಂದೆ ಟ್ವೀಟ್ ಮೂಲಕ ತಿಳಿಸಿದ್ದರು.

ಅನುಕ್ರಮವಾಗಿ ಮೊದಲು ಸೀಜ್‌ ಮಾಡಿದ್ದ ವಾಹನಗಳನ್ನು ಮೊದಲು ಮರಳಿಸಲಾಗುವುದು. ವಾಹನಗಳನ್ನು ಮರಳಿಸುವ ಮುನ್ನ ದಾಖಲೆಗಳನ್ನು ಪರಿಶೀಲಿಸಲಾಗುವುದು. ಮುಖ್ಯಮಂತ್ರಿ ಮತ್ತು ಗೃಹ ಸಚಿವರ ಅನುಮೋದನೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದರು.

ಒಟ್ಟಾರೆ ಪ್ರಕ್ರಿಯೆಯನ್ನು ಸರಳೀಕರಿಸುವ ಕೆಲಸ ಶುರುವಾಗಿದೆ. ಶೀಘ್ರ ವಾಹನಗಳನ್ನು ಮರಳಿಸುವ ಕಾರ್ಯ ಆರಂಭವಾಗಲಿದೆ ಎಂದು ಸ್ಪಷ್ಟಪಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.