ಜಿ. ಪರಮೇಶ್ವರ, ಗೃಹ ಸಚಿವ
ಬೆಂಗಳೂರು: ‘ಹೊರ ರಾಜ್ಯದಿಂದ ಬಂದವರಿಂದ ಹೆಚ್ಚು ಅಪರಾಧ ಪ್ರಕರಣಗಳು ನಡೆಯುತ್ತಿರುವುದನ್ನು ನೋಡುತ್ತಿದ್ದೇವೆ. ಅನೇಕ ಕಡೆ ಕಟ್ಟಡ ಕಾರ್ಮಿಕರಿಂದ ಅಪರಾಧ ಕೃತ್ಯಗಳು ನಡೆದಿವೆ. ಈ ಬಗ್ಗೆ ಕಾರ್ಮಿಕ ಇಲಾಖೆಯ ಅಧಿಕಾರಿಗಳ ಜೊತೆ ಜಂಟಿಯಾಗಿ ಸಭೆ ಮಾಡಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು’ ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಮಗುವಿನ ಮೇಲೆ ಅತ್ಯಾಚಾರ ಯತ್ನ ಮತ್ತು ಕೊಲೆ ಘಟನೆ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಹೊರ ರಾಜ್ಯದ ಸಾಕಷ್ಟು ಜನ ಬೆಂಗಳೂರಿಗೆ ಬರುತ್ತಾರೆ. ಹೀಗೆ ಬಂದವರಿಗೆ ಇಲ್ಲಿನ ಸಂಸ್ಕೃತಿ, ಜನರ ಭಾವನೆ ಅರ್ಥ ಆಗುವುದಿಲ್ಲವೊ ಗೊತ್ತಿಲ್ಲ. ಅವರು ಆ ರೀತಿ ವರ್ತಿಸುತ್ತಿದ್ದಾರೆ’ ಎಂದರು.
‘ಹುಬ್ಬಳ್ಳಿಯಲ್ಲಿ ಬಿಹಾರ ಮೂಲದ ವ್ಯಕ್ತಿ ಐದು ವರ್ಷದ ಮಗುವನ್ನು ಎತ್ತಿಕೊಂಡು ಹೋಗಿ ಕೊಲೆ ಮಾಡಿದ್ದಾನೆ. ಸ್ಥಳ ಪರಿಶೀಲನೆಗೆ ಕರೆದುಕೊಂಡು ಹೋಗುವಾಗ ಪೊಲೀಸರ ಮೇಲೆ ಆರೋಪಿ ದಾಳಿ ಮಾಡಿದ್ದಾನೆ. ಪೊಲೀಸರು ಅವರ ಆತ್ಮರಕ್ಷಣೆ ಮಾಡಿಕೊಳ್ಳಬೇಕಲ್ಲವೇ? ನಾನು ತಕ್ಷಣ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ಮಾಡಲು ಸೂಚಿಸಿದ್ದೇನೆ. ತನಿಖೆಯ ನಂತರ ಸತ್ಯಾಂಶ ಗೊತ್ತಾಗಲಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.