ADVERTISEMENT

ಕ್ರಿಮಿನಲ್ ಪ್ರಕರಣ: ಸುಪ್ರೀಂ ಕೋರ್ಟ್ ಮಾರ್ಗಸೂಚಿ ಪಾಲನೆಗೆ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 19 ಮೇ 2020, 21:25 IST
Last Updated 19 ಮೇ 2020, 21:25 IST

ಬೆಂಗಳೂರು: ಕ್ರಿಮಿನಲ್ ಪ್ರಕರಣಗಳಲ್ಲಿ ತೀರ್ಪು ನೀಡುವಾಗ ಸುಪ್ರೀಂಕೋರ್ಟ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ವಿಚಾರಣಾ ನ್ಯಾಯಾಲಯಗಳಿಗೆ ಹೈಕೋರ್ಟ್ ನಿರ್ದೇಶಿಸಿದೆ.
ತುಮಕೂರು ಜಿಲ್ಲೆ ಶಿರಾದ ವೆಂಕಟಾಚಲ ಎಂಬುವವರು ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಮತ್ತು ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರನ್ನು ಒಳಗೊಂಡ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಎಂ. ಅರುಣ್ ಶ್ಯಾಮ್, ಕೊಲೆ ಯತ್ನ ಆರೋಪದ ಪ್ರಕರಣಗಳಲ್ಲಿ ವಿಚಾರಣಾ ನ್ಯಾಯಾಲಯಗಳು ಜೀವಾವಧಿ ಶಿಕ್ಷೆ ವಿಧಿಸುವುದಿಲ್ಲ. ಅಪರೂಪದ ಪ್ರಕರಣದಲ್ಲಿ ಮಾತ್ರ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ. ಆದರೆ, ಈ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸುವಂತಹ ಯಾವುದೇ ಬಲವಾದ ಸಾಕ್ಷ್ಯವಿಲ್ಲ ಎಂದು ಪ್ರತಿಪಾದಿಸಿದರು.

‘ಶಿಕ್ಷೆ ವಿಧಿಸುವ ಮುನ್ನ ವಿಚಾರಣಾ ನ್ಯಾಯಾಲಯ ಸುಪ್ರೀಂಕೋರ್ಟ್ ಮಾರ್ಗಸೂಚಿ ಪರಿಗಣಿಸಿಲ್ಲ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.

ADVERTISEMENT

ಇದನ್ನು ಪರಿಗಣಿಸಿದ ನ್ಯಾಯಪೀಠ, ಸುಪ್ರೀಂ ಕೋರ್ಟ್ ಮಾರ್ಗಸೂಚಿ ಪಾಲನೆ ಕುರಿತು ಸುತ್ತೋಲೆ ಹೊರಡಿಸುವಂತೆ ಹೈಕೋರ್ಟ್ ರಿಜಿಸ್ಟ್ರಾರ್ ಅವರಿಗೆ ನಿರ್ದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.