ADVERTISEMENT

ಬೆಳೆ ಹಾನಿ ಪರಿಹಾರ: ರೈತರಿಗೆ ಹೆಚ್ಚುವರಿಯಾಗಿ ₹ 1,135.49 ಕೋಟಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2022, 20:27 IST
Last Updated 9 ಫೆಬ್ರುವರಿ 2022, 20:27 IST
   

ಬೆಂಗಳೂರು: ‘ಬೆಳಗಾವಿ ಅಧಿವೇಶನದಲ್ಲಿ ಬೆಳೆ ಪರಿಹಾರ ಮೊತ್ತವನ್ನು ಪರಿಷ್ಕರಿಸಲಾಗಿದ್ದು, ಹೆಚ್ಚುವರಿ ಮೊತ್ತ₹ 1,135.49 ಕೋಟಿಯನ್ನು ಬುಧವಾರ ಬಿಡುಗಡೆ ಮಾಡಲಾಗಿದೆ. ಮುಂದಿನ 48 ಗಂಟೆಯ ಒಳಗೆ ಈ ಹಣ ರೈತರ ಖಾತೆಗೆ ಜಮೆ ಆಗಲಿದೆ’ ಎಂದು ಕಂದಾಯ ಸಚಿವ ಆರ್‌.ಅಶೋಕ ತಿಳಿಸಿದರು.

‘18.02 ಲಕ್ಷ ರೈತರ ಬ್ಯಾಂಕ್‌ ಖಾತೆಗೆ ಈಗಾಗಲೇ ಒಟ್ಟು ₹ 1,252.89 ಕೋಟಿ ಇನ್‍ಪುಟ್ ಸಬ್ಸಿಡಿ ನೇರವಾಗಿ ಜಮೆ ಆಗಿದೆ. ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಇದೀಗ ಹೆಚ್ಚುವರಿ ಪರಿಹಾರ ಬಿಡುಗಡೆ ಮಾಡಲಾಗಿದೆ. ಆ ಮೂಲಕ, ರಾಜ್ಯದಲ್ಲಿ 2021ನೇ ಸಾಲಿನಲ್ಲಿ ಬಿದ್ದ ಅಕಾಲಿಕ ಮಳೆ, ಪ್ರವಾಹದಿಂದ ಬೆಳೆ ಹಾನಿಗೆ ಒಳಗಾದ ರೈತರಿಗೆ ಈವರೆಗೆ ₹ 2,388.39 ಕೋಟಿ ಪರಿಹಾರ ನೀಡಿದಂತಾಗಿದೆ’ ಎಂದರು.

‘2021ನೇ ಸಾಲಿನಲ್ಲಿ ಬಿದ್ದ ಅಕಾಲಿಕ ಮಳೆ, ಪ್ರವಾಹದಿಂದ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿ ಉಂಟಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ನಿಗದಿಯಾದ ದರದಲ್ಲಿ ಬೆಳೆ ಹಾನಿಗೆ ಇನ್‌ಪುಟ್ ಸಬ್ಸಿಡಿ ಮೊತ್ತವನ್ನು ದಾಖಲೆಯ ಸಮಯದಲ್ಲಿ ಬಿಡುಗಡೆ ಮಾಡಲಾಗಿದೆ. ಬೆಳೆ ಹಾನಿಗೆ ಹೆಚ್ಚಿನ ಆರ್ಥಿಕ ನೆರವು ನೀಡಬೇಕೆಂಬ ಉದ್ದೇಶದಿಂದ ಬೆಳಗಾವಿಯಲ್ಲಿ ಅಧಿವೇಶನದಲ್ಲಿ ಇನ್‌ಪುಟ್ ಸಬ್ಸಿಡಿ ಮೊತ್ತವನ್ನು ಪರಿಷ್ಕರಿಸಿ ಘೋಷಿಸಲಾಗಿತ್ತು’ ಎಂದು ಅವರು ವಿವರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.