ADVERTISEMENT

ಬೆಳೆ ವಿಮೆ: ಆ. 14ರ ವರೆಗೆ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 29 ಜುಲೈ 2019, 20:06 IST
Last Updated 29 ಜುಲೈ 2019, 20:06 IST
   

ಬೆಂಗಳೂರು: ಬೆಳೆ ವಿಮೆ ನೋಂದಣಿ ಅವಧಿಯನ್ನು ಆಗಸ್ಟ್ 14ರ ವರೆಗೆ ವಿಸ್ತರಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೃಷಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಮುಂಗಾರು ಕೈಕೊಟ್ಟಿದ್ದು, ರೈತರು ಬೆಳೆ ವಿಮೆ ನೋಂದಣಿ ಮಾಡಿಸದ ಬಗ್ಗೆ ‘ಪ್ರಜಾವಾಣಿ’ ಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು.

ಈ ವರದಿಗೆ ಸ್ಪಂದಿಸಿ ಅವಧಿ ವಿಸ್ತರಿಸಲು ಕ್ರಮ ಕೈಗೊಂಡಿದ್ದಾರೆ.

ADVERTISEMENT

ವಿವಿಧ ಕಾರಣಗಳಿಂದಾಗಿ ಬೆಳೆ ವಿಮೆ ನೋಂದಣಿ ಕನಿಷ್ಠ ಪ್ರಮಾಣದಲ್ಲಿರುವುದರಿಂದ ಅವಧಿಯನ್ನು ವಿಸ್ತರಿಸುವಂತೆ ಹಾಗೂ ಇದಕ್ಕೆ ಅಗತ್ಯವಿದ್ದಲ್ಲಿ ಕೇಂದ್ರ ಸರ್ಕಾರಕ್ಕೆ ಸೂಕ್ತ ಪ್ರಸ್ತಾವನೆ ಕಳುಹಿಸುವಂತೆಯೂ ಆರ್ಥಿಕ ಮತ್ತು ಕೃಷಿ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಅವರು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.