ADVERTISEMENT

ನೇಮಕಾತಿ, ಬಡ್ತಿ ಸ್ಥಗಿತಕ್ಕೆ ಸೂಚನೆ: ವಂದಿತಾ ಶರ್ಮ

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2022, 19:30 IST
Last Updated 18 ನವೆಂಬರ್ 2022, 19:30 IST
ವಂದಿತಾ ಶರ್ಮ
ವಂದಿತಾ ಶರ್ಮ   

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳದ ಪ್ರಮಾಣಕ್ಕೆ ಅನುಗುಣವಾಗಿ ರೋಸ್ಟರ್‌ ಬಿಂದುಗಳನ್ನು ಗುರುತಿಸುವವರೆಗೂ ಎಲ್ಲ ಇಲಾಖೆಗಳಲ್ಲಿ ನೇರ ನೇಮಕಾತಿ ಮತ್ತು ಬಡ್ತಿ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಸೂಚನೆ ನೀಡಿದ್ದಾರೆ.

ಎಲ್ಲ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳಿಗೆ ಗುರುವಾರ ಟಿಪ್ಪಣಿ ರವಾನಿಸಿರುವ ಅವರು, ‘ಎಸ್‌.ಸಿ ಮತ್ತು ಎಸ್‌.ಟಿ ಸಮುದಾಯಗಳಿಗೆ ಹೆಚ್ಚಿಸಲಾಗಿರುವ ಮೀಸಲಾತಿ ಜಾರಿ ಗೊಳಿಸಲು ರೋಸ್ಟರ್‌ ಬಿಂದುಗಳನ್ನು ಗುರುತಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ. ಇದು ಅಂತಿಮಗೊಂಡು, ಪ್ರಕಟಿಸುವವರೆಗೂ ಎಲ್ಲ ನೇರ ನೇಮಕಾತಿ ಪ್ರಕ್ರಿಯೆಗಳನ್ನು ತಡೆ ಹಿಡಿಯಬೇಕು. ಮೀಸಲಾತಿ ಅನ್ವಯವಾಗುವ ಹುದ್ದೆಗಳಿಗೆ ಬಡ್ತಿ ನೀಡಲು ಇಲಾಖಾ ಮುಂಬಡ್ತಿ ಸಮಿತಿ ಸಭೆ ಆಯೋಜಿಸಬಾರದು’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT