ಸಿದ್ದರಾಮಯ್ಯ
ಬೆಂಗಳೂರು: ‘ರಾಜ್ಯದಲ್ಲಿ ನೆಲೆಸಿರುವ ನಿವೃತ್ತ ಸೈನಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಿದೆ. ಅವರ ಬೇಡಿಕೆಗಳಿಗೆ ಸ್ಪಂದಿಸಲಿದೆ. ಸೇನಾ ಕ್ಯಾಂಟೀನ್‌ಗೆ ಅಬಕಾರಿ ಸುಂಕ ಹಾಕುವುದಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
‘ತ್ಯಾಗ ಮನೋಭಾವದಿಂದ ಯೋಧರು ದೇಶ ರಕ್ಷಣೆಯಲ್ಲಿ ತೊಡಗಿದ್ದಾರೆ. ದೇಶದ ರಕ್ಷಣೆ ಕೇವಲ ಯೋಧರ ಜವಾಬ್ದಾರಿಯಲ್ಲ. 140 ಕೋಟಿ ಭಾರತೀಯರ ಜವಾಬ್ದಾರಿ. ದುಷ್ಟರ ಸಂಹಾರದ ವಿಚಾರದಲ್ಲಿ ಭಾರತ ಯಾವತ್ತೂ ರಾಜಿ ಆಗಿಲ್ಲ. ಮುಂದೆಯೂ ಆಗುವುದಿಲ್ಲ. ಇದು ಪ್ರತಿಯೊಬ್ಬ ಭಾರತೀಯರ ಬದ್ಧತೆ’ ಎಂದರು.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ‘ನಿವೃತ್ತ ಸೈನಿಕರ ಅಗತ್ಯಗಳಿಗೆ, ಅವರ ಬೆಂಬಲಕ್ಕೆ ನಮ್ಮ ಸರ್ಕಾರ ಯಾವತ್ತೂ ಸಿದ್ಧವಿದೆ. ಅವರ ಕಲ್ಯಾಣಕ್ಕಾಗಿ ನಿಗಮದ ರೀತಿಯ ವ್ಯವಸ್ಥೆ ರೂಪಿಸುವ ಬಗ್ಗೆ ಚಿಂತನೆ ನಡೆಯುತ್ತಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.