ಬೆಂಗಳೂರು: ಸುಳ್ಳು ದಾಖಲೆಸೃಷ್ಟಿಸಿ ಜಮೀನು ಪರಭಾರೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಅವರ ವಿರುದ್ಧದ ಆರೋಪಗಳಲ್ಲಿ ಸತ್ಯಾಂಶ ಇಲ್ಲ ಎಂದು ಸಲ್ಲಿಸಲಾಗಿದ್ದ ‘ಬಿ’ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ಕೋರ್ಟ್ ವಜಾ ಮಾಡಿದೆ.
ಈ ಕುರಿತಂತೆ ಕಾಯ್ದಿರಿಸಿದ್ದ ಆದೇಶವನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಅವರು ಸೋಮವಾರ ಪ್ರಕಟಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.