ADVERTISEMENT

‘ಭಾಷಾ ಮಾಧ್ಯಮ: ಕೋರ್ಟ್‌ ತೀರ್ಪು ಪುನರ್‌ ಪರಿಶೀಲನೆ ಅಗತ್ಯ’

ಭಾಷಾ ಮಾಧ್ಯಮ ವಿವಾದ– ಸಚಿವ ಸಿ.ಟಿ.ರವಿ

​ಪ್ರಜಾವಾಣಿ ವಾರ್ತೆ
Published 26 ಜನವರಿ 2020, 19:47 IST
Last Updated 26 ಜನವರಿ 2020, 19:47 IST
ಸಿ.ಟಿ.ರವಿ 
ಸಿ.ಟಿ.ರವಿ    

ಚಿಕ್ಕಮಗಳೂರು: ‘ಭಾಷಾ ಮಾಧ್ಯಮದ ತೀರ್ಪು ಪುನರ್‌ ಪರಿಶೀಲನೆಗೆ ಕೋರಿ ಸುಪ್ರೀಂ ಕೋರ್ಟ್‌ಗೆ ವಿಶೇಷ ಅರ್ಜಿ ಸಲ್ಲಿಸಬೇಕಾದ ಅಗತ್ಯ ಇದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಹೇಳಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಭಾನುವಾರ ಏರ್ಪಡಿಸಿದ್ದ ಮೈಸೂರು ವಿಭಾಗದ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ‘ಸರ್ಕಾರವು ಇತರ ರಾಜ್ಯಗಳ ಸಹಯೋಗ ಪಡೆದು ವಿಶೇಷ ಅರ್ಜಿ ಸಲ್ಲಿಸುವ ಪ್ರಯತ್ನ ಮಾಡಲೇಬೇಕಿದೆ. ಇನ್ನು ಹತ್ತಿಪ್ಪತ್ತು ವರ್ಷಗಳಲ್ಲಿ ರಾಜ್ಯ ಭಾಷೆಗಳು ಆಡು ಭಾಷೆಗಳಾಗುವ, 50 ವರ್ಷಗಳ ನಂತರ ಅಳಿಯುವ ಅಪಾಯ ಇದೆ. ಭಾರತೀಯ ಭಾಷೆಗಳು ಕಠಿಣ ಪರಿಸ್ಥಿತಿಯಲ್ಲಿವೆ’ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT