ADVERTISEMENT

ರೈತ ವಿರೋಧಿಯಾದರೆ ಎಪಿಎಂಸಿ ತಿದ್ದುಪಡಿ ಕಾಯ್ದೆ ಹಿಂದಕ್ಕೆ: ಸಿ.ಟಿ.ರವಿ ಭರವಸೆ

​ಪ್ರಜಾವಾಣಿ ವಾರ್ತೆ
Published 20 ಮೇ 2020, 12:25 IST
Last Updated 20 ಮೇ 2020, 12:25 IST
ಸಿ.ಟಿ.ರವಿ
ಸಿ.ಟಿ.ರವಿ    

ಬೆಂಗಳೂರು: ಎಪಿಎಂಸಿ ತಿದ್ದುಪಡಿ ಕಾಯ್ದೆ ರೈತ ವಿರೋಧಿ ಎಂಬುದು ಸಾಬೀತಾದರೆ ಅದನ್ನು ಹಿಂಪಡೆಯಲು ಸಿದ್ಧರಿದ್ದೇವೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದರು.

ವಿಧಾನಸೌಧದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರ ಮಾಡಿರುವ ತಿದ್ದುಪಡಿಯಿಂದ ರೈತರಿಗೆ ಅನುಕೂಲವಾಗುತ್ತದೆಯೇ ಹೊರತು. ಹಾನಿ ಆಗುವುದಿಲ್ಲ ಎಂದು ತಿಳಿಸಿದರು.

ವಿರೋಧ ಪಕ್ಷಗಳಾದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಈ ವಿಷಯದಲ್ಲಿ ರಾಜಕಾರಣ ಮಾಡುತ್ತಿವೆ. ರೈತರಿಗೆ ಅನನುಕೂಲ ಏನು ಎಂಬುದನ್ನು ಇವರು ತೋರಿಸಲಿ ಎಂದು ಸವಾಲು ಹಾಕಿದರು.

ADVERTISEMENT

ಲಾಕ್‌ಡೌನ್‌ ಸಡಿಲಿಕೆಯ ಬಳಿಕ ಈಜುಕೊಳ, ಜಿಮ್‌ ಕಬ್ಬಡಿ ಹೊರುತುಪಡಿಸಿ ಉಳಿದ ಕ್ರೀಡಾ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಕೆಲವು ಕ್ರೀಡಾ ಕ್ಲಬ್‌ಗಳಿಗೆ ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದ್ದು, ಪ್ರೇಕ್ಷರಿಗೆ ಅವಕಾಶ ನೀಡದಂತೆ ಸೂಚನೆ ನೀಡಿರುವುದಾಗಿಯೂ ತಿಳಿಸಿದರು.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಆಡಿದರೂ ಕಡ್ಡಾಯವಾಗಿ ಮಾಸ್ಕ್ ಹಾಕಬೇಕು ಎಂದೂ ಅವರು ಹೇಳಿದರು.

ಕಬಡ್ಡಿ, ಈಜು, ಜಿಮ್‌ ಬಿಟ್ಟು ಉಳಿದ ಕ್ರೀಡೆಗೆ ಅವಕಾಶ
ಬೆಂಗಳೂರು:
ಕಬಡ್ಡಿ, ಈಜು, ಜಿಮ್‌ನಲ್ಲಿ ಫಿಟ್ನೆಸ್‌ ಬಿಟ್ಟು ಉಳಿದ ಎಲ್ಲ ಕ್ರೀಡಾ ಚಟುವಟಿಕೆಗಳಿಗೆ ಮತ್ತು ಅಭ್ಯಾಸಕ್ಕೆ ಅವಕಾಶ ಇದೆ ಎಂದು ಕ್ರೀಡಾ ಮತ್ತು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ.

ಅಂತರ ಕಾಪಾಡಿಕೊಂಡು ಆಡಬಹುದಾದ ಎಲ್ಲ ಕ್ರೀಡೆಗಳಿಗೂ ಅವಕಾಶ ಇದೆ. ಆದರೆ, ಪ್ರೇಕ್ಷಕರಿಗೆ ಅವಕಾಶವಿಲ್ಲ. ಮಾಸ್ಕ್‌, ಸ್ಯಾನಿಟೈಸರ್‌ ಕಡ್ಡಾಯವಾಗಿ ಬಳಸಬೇಕು ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕ್ರೀಡಾಂಗಣ ಮತ್ತು ಅಲ್ಲಿನ ಶೌಚಾಲಯಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಆಟಗಾರರಿಗೆ ಥರ್ಮಲ್‌ ಸ್ಕ್ರೀನಿಂಗ್‌ ಮೂಲಕ ಪರೀಕ್ಷಿಸಿಯೇ ಒಳಗೆ ಕಳಿಸಬೇಕು. ಆಟಗಾರರು ಟವೆಲ್‌, ಟಿಷ್ಯೂ ಪೇಪರ್‌ಗಳನ್ನು ವ್ಯಕ್ತಿಗತವಾಗಿ ಬಳಸಬೇಕು ಎಂದರು.

ಮೇ 31 ರವರೆಗೆ ಕ್ರೀಡಾ ಕ್ಲಬ್‌ಗಳಲ್ಲಿ ರಿಕ್ರಿಯೇಷನ್‌, ರೆಸ್ಟೋರೆಂಟ್‌ಗಳಿಗೆ ಅವಕಾಶ ಇರುವುದಿಲ್ಲ ಎಂದೂ ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.