
ಬೆಂಗಳೂರು: ‘ಬೆಂಗಳೂರಿನ ಅಭಿವೃದ್ಧಿಗೆ ಅದು ಕೇಂದ್ರಾಡಳಿತ ಪ್ರದೇಶವಾಗಬೇಕೆಂದು ನಾನು ಹೇಳಿದ್ದೇನೆ ಎಂಬಂತೆ ಯಾರೋ ಕಿಡಿಗೇಡಿಗಳು ನಕಲಿ ಸುದ್ದಿಯನ್ನು 'ಪ್ರಜಾವಾಣಿ' ವರದಿ ಎಂಬಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಇಂಥ ಸುಳ್ಳು ಸುದ್ದಿಯನ್ನು ನಂಬಬೇಡಿ’ ಎಂದು ಬಿಜೆಪಿ ಮುಖಂಡ ಸಿ.ಟಿ. ರವಿ ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಅವರು ಈ ಕುರಿತ ಪೋಸ್ಟ್ ಹಂಚಿಕೊಂಡಿದ್ದಾರೆ.
ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮವಾದ ‘ಪ್ರಜಾವಾಣಿ’ಯ ಹೆಸರಿನಲ್ಲಿ, ಅದರದ್ದೇ ಅಂತರ್ಜಾಲ ಪುಟದ ವಿನ್ಯಾಸವನ್ನೇ ನಕಲು ಮಾಡಿ ಹರಡುತ್ತಿರುವುದನ್ನು ಸುದ್ದಿ ಸಂಸ್ಥೆ ಬಯಲಿಗೆಳೆದಿತ್ತು. ಆ ಸುದ್ದಿಯನ್ನು ಹಂಚಿಕೊಂಡು ಸಿ.ಟಿ. ರವಿ ಪೋಸ್ಟ್ ಮಾಡಿದ್ದಾರೆ.
‘ಬೆಂಗಳೂರು ಕೇಂದ್ರಾಡಳಿತ ಪ್ರದೇಶವಾಗಬೇಕೆಂಬ ಹೇಳಿಕೆಯನ್ನು ನಾನು ಎಂದಿಗೂ ನೀಡಿಲ್ಲ. ಇದು ಫೇಕ್ ಚಿತ್ರ ಎಂದು ಪ್ರಜಾವಾಣಿಯೂ ಸ್ಪಷ್ಟಪಡಿಸಿದೆ. ಇದಕ್ಕಾಗಿ ಪತ್ರಿಕೆಗೆ ಧನ್ಯವಾದಗಳು’ ಎಂದಿದ್ದಾರೆ.
‘ಇಂತಹ ಸುಳ್ಳು ಸುದ್ದಿಗಳನ್ನು ನಂಬಬೇಡಿ, ಅವುಗಳನ್ನು ಹಂಚಿಕೊಳ್ಳಬೇಡಿ ಎಂದು ಮನವಿ ಮಾಡುತ್ತೇನೆ. ಇಂತಹ ಎಡಿಟ್ ಮಾಡಿದ ಕಿಡಿಗೇಡಿಗಳ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಿದ್ದೇನೆ’ ಎಂದೂ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.