ಬೆಂಗಳೂರು: ವಿಧಾನಮಂಡಲ ಅಧಿವೇಶನ ನಡೆಯುವುದರಿಂದ ಜ.28ರಿಂದ ಫೆ.5ರವರೆಗೆ ನಿಷೇಧಾಜ್ಞೆ (ಸೆಕ್ಷನ್ 144) ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಅಧಿವೇಶನ ನಡೆಯುವ ವಿಧಾನಸೌಧದ ಸುತ್ತಲೂ ಎರಡು ಕಿ.ಮೀ.ವ್ಯಾಪ್ತಿಯಲ್ಲಿ ಬೆಳಿಗ್ಗೆ 6ರಿಂದ ಮಧ್ಯರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ಇರಲಿದೆ.
‘ಈ ಅವಧಿಯಲ್ಲಿಐದಕ್ಕಿಂತ ಹೆಚ್ಚು ಮಂದಿ ಗುಂಪು ಸೇರುವುದು, ಮೆರವಣಿಗೆ ಮತ್ತು ಸಭೆ ಸೇರುವುದು, ಸ್ಫೋಟಕ ಸಿಡಿಸುವುದು, ಪ್ರತಿಕೃತಿ ದಹನ, ಘೋಷಣೆಗಳನ್ನು ಕೂಗುವುದು, ಶಸ್ತ್ರಾಸ್ತ್ರ ಹಾಗೂ ಮಾರಕಾಸ್ತ್ರಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ’ ಎಂದೂ ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.