ಮಂಗಳೂರು: ನಗರದಾದ್ಯಂತ ವಿಧಿಸಲಾಗಿರುವ ಕರ್ಫ್ಯೂ ಅನ್ನು ಇದೇ 22 ರ ಮಧ್ಯರಾತ್ರಿವರೆಗೆ ವಿಸ್ತರಿಸಿ, ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಗುರುವಾರ ನಡೆದ ಘಟನೆಗಳ ನಂತರ ಮಧ್ಯಾಹ್ನದಿಂದ ಶುಕ್ರವಾರ ಸಂಜೆ 6 ಗಂಟೆಯವರೆಗೆ ಕರ್ಫ್ಯೂ ವಿಧಿಸಲಾಗಿತ್ತು. ಪರಿಸ್ಥಿತಿಯನ್ನು ಅವಲೋಕನ ಮಾಡಿ, ಇದೇ 22 ರಂದು ಮಧ್ಯರಾತ್ರಿವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.