ADVERTISEMENT

ತಮಿಳುನಾಡಿಗೆ ಜನವರಿಯಲ್ಲಿ ನಿತ್ಯ ಸಾವಿರ ಕ್ಯೂಸೆಕ್‌ ನೀರು ಹರಿಸಲು CWRC ಶಿಫಾರಸು

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2023, 10:09 IST
Last Updated 19 ಡಿಸೆಂಬರ್ 2023, 10:09 IST
<div class="paragraphs"><p>ಕೆಆರ್‌ಎಸ್‌ ಡ್ಯಾಂ</p></div>

ಕೆಆರ್‌ಎಸ್‌ ಡ್ಯಾಂ

   

ನವದೆಹಲಿ: ತಮಿಳುನಾಡಿಗೆ 2024ರ ಜನವರಿಯಲ್ಲಿ ಮತ್ತೆ ಪ್ರತಿನಿತ್ಯ 1030 ಕ್ಯೂಸೆಕ್ ನೀರು ಹರಿಸಲು ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ಶಿಫಾರಸು ಮಾಡಿದೆ.

ಡಿಸೆಂಬರ್ ಅಂತ್ಯದವರೆಗೆ ಪ್ರತಿ ದಿನ 3,128 ಕ್ಯೂಸೆಕ್ ನೀರು ಹರಿಸಬೇಕು. ಹಾಗೇ ಜನವರಿಯಲ್ಲಿ 1,030 ಕ್ಯೂಸೆಕ್ ನೀರು ಬಿಡಬೇಕು ಎಂದು ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ ಹೇಳಿದೆ.

ADVERTISEMENT

ಕರ್ನಾಟಕದಲ್ಲಿ ಮಳೆ ಕೊರತೆಯಿಂದಾಗಿ ತೀವ್ರ ಬರ ಆವರಿಸಿದೆ. ಬರುವ ಬೇಸಿಗೆಗೆ ಜಲಾಶಯಗಳಲ್ಲಿ ಕುಡಿಯುವ ನೀರಿನ ಅಭಾವ ಎದುರಾಗುವ ಸಾಧ್ಯತೆಗಳಿವೆ. ಆದರೂ ಕಾವೇರಿ ನೀರು ನಿಯಂತ್ರಣ ಸಮಿತಿ ಮತ್ತೆ ನೀರು ಹರಿಸುವಂತೆ ಹೇಳಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಕಾವೇರಿ ನೀರು ನಿಯಂತ್ರಣ ಸಮಿತಿ ಮುಂದೆ ಕರ್ನಾಟಕದ ವಾದ....

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.