ಬೆಂಗಳೂರು: ಕೋವಿಡ್‌ನಿಂದ ಕೆಲ ದಿನಗಳಿಗೆ ಹಿಂದಷ್ಟೇ ಗುಣಮುಖರಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಮತ್ತೆ ಜ್ವರ, ಕೆಮ್ಮು ಕಾಣಿಸಿಕೊಂಡಿದ್ದು, ಜಯನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ಬುಧವಾರ ದಾಖಲಾಗಿದ್ದಾರೆ ಎನ್ನಲಾಗಿದೆ.
ಜಯನಗರದ ಅಪೊಲೊ ಆಸ್ಪತ್ರೆಗೆ ಅವರು ಸ್ಥಳಾಂತರಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಅವರು ಆ. 24ರಂದು ಸುಗುಣ ಆಸ್ಪತ್ರೆಗೆ ದಾಖಲಾಗಿದ್ದರು. ಆರು ದಿನಗಳ ಚಿಕಿತ್ಸೆ ನಂತರ ಅವರು, ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.