ADVERTISEMENT

ಡಿ.ಕೆ.ಶಿವಕುಮಾರ್‌ ಜಾಮೀನು ಅರ್ಜಿ ವಿಚಾರಣೆ ಅಂ‌‌ತ್ಯ: ಸೆ.25ರಂದು ಆದೇಶ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2019, 4:06 IST
Last Updated 25 ಸೆಪ್ಟೆಂಬರ್ 2019, 4:06 IST
   

ನವದೆಹಲಿ:ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್‌ ಶಾಸಕ ಡಿ.ಕೆ. ಶಿವಕುಮಾರ್‌ ಅವರ ಜಾಮೀನು ಅರ್ಜಿ ವಿಚಾರಣೆಯ ಆದೇಶವನ್ನು ಬುಧವಾರ (ಸೆ.25ರಂದು) ಪ್ರಕಟಿಸುವುದಾಗಿನ್ಯಾಯಾಲಯ ಶನಿವಾರ ತಿಳಿಸಿದೆ.

ದೆಹಲಿಯ ರೋಸ್‌ ಅವೆನ್ಯೂ ನ್ಯಾಯಾಲಯದಲ್ಲಿ ಡಿ.ಕೆ.ಶಿವಕುಮಾರ್‌ ಜಾಮೀನು ಅರ್ಜಿ ವಿಚಾರಣೆ ನಡೆಯಿತು.ಇ.ಡಿ ಪರವಾಗಿ ನಟರಾಜ್‌ ಹಾಗೂ ಡಿ.ಕೆ.ಶಿವಕುಮಾರ್‌ ಪರವಾಗಿ ಅಭಿಷೇಕ್‌ ಮನು ಸಿಂಘ್ವಿ ಮತ್ತು ಮುಕುಲ್‌ ರೋಹಟ್ಗಿ ವಾದ ಮಂಡಿಸಿದರು.

ADVERTISEMENT

ಎರಡು ಕಡೆಯ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಪೀಠ ಜಾಮೀನು ಅರ್ಜಿ ವಿಚಾರಣೆಯ ಆದೇಶವನ್ನು ಬುಧವಾರ ಪ್ರಕಟಿಸುವುದಾಗಿ ನ್ಯಾಯಾಪೀಠ ತಿಳಿಸಿತು.

ಜಾಮೀನಿನ ಆದೇಶ ಪ್ರಕಟವಾಗುವವರೆಗೂ ಡಿ.ಕೆ.ಶಿವಕುಮಾರ್ ತಿಹಾರ್ ಜೈಲಿನಲ್ಲಿ ಇರಬೇಕಾಗತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.