ADVERTISEMENT

ಜಾತಿ ಜನಗಣತಿ: ನಿಲುವು ಪ್ರತಿಪಾದಿಸಲಿ; ಡಿಕೆಶಿ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2025, 16:16 IST
Last Updated 13 ಏಪ್ರಿಲ್ 2025, 16:16 IST
<div class="paragraphs"><p>ಡಿಕೆಶಿ </p></div>

ಡಿಕೆಶಿ

   

ಬೆಂಗಳೂರು: ‘ವೀರಶೈವ ಮಹಾಸಭಾದವರು ಅವರ ಸಮಾಜ ರಕ್ಷಿಸಿಕೊಳ್ಳಲು ಅವರನ್ನು ನಾವು ಏಕೆ ಟೀಕಿಸಬೇಕು. ಪ್ರಜಾಪ್ರಭುತ್ವ, ಸಂವಿಧಾನದ ಪ್ರಕಾರ ಅವರು ತಮ್ಮ ನಿಲುವು ಪ್ರತಿಪಾದಿಸಲಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಜಾತಿ ಜನಗಣತಿ ಬಗ್ಗೆ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಟೀಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಈ ವರದಿಯ ಬಗ್ಗೆ ವಿಧಾನಸಭೆಯಲ್ಲಿ ಚರ್ಚಿಸಲು ಅವಕಾಶ ನೀಡಲಾಗುವುದು ಎಂದು ಸಿ.ಎಂ ತಿಳಿಸಿದ್ದಾರೆ. ಇದಕ್ಕಿಂತ ಮುಕ್ತವಾಗಿ ಇನ್ನೇನು ‌ಮಾಡಲು ಸಾಧ್ಯ’ ಎಂದರು.

ADVERTISEMENT

ಒಕ್ಕಲಿಗ ಸಮುದಾಯ ಬೆನ್ನಿಗೆ ನಿಲ್ಲಬೇಕೆಂದು ಚುನಾವಣೆಗೆ ಮುನ್ನ ನೀಡಿದ್ದ ಹೇಳಿಕೆ ಬಗ್ಗೆ ಗಮನಸೆಳೆದಾಗ, ‘ಅದು ಬೇರೆ ವಿಚಾರ. ಈಗ ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷ. ಎಲ್ಲರಿಗೂ ನ್ಯಾಯ ಕೊಡಿಸುವುದು ಕರ್ತವ್ಯ, ಧ್ವನಿ, ಧ್ಯೇಯ, ಉದ್ದೇಶ, ಸಂಕಲ್ಪ ಎಲ್ಲವೂ’ ಎಂದರು.

‘ಒಕ್ಕಲಿಗರ ಸಂಖ್ಯೆ 61 ಲಕ್ಷ’ ಎಂದು ವರದಿಯಲ್ಲಿ ತೋರಿಸಲಾಗಿದೆ ಎಂದಾಗ, ‘ನಾನು ಕೆಪಿಸಿಸಿ ಅಧ್ಯಕ್ಷ ಅಷ್ಟೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.