ADVERTISEMENT

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ಗೆ ಕೋವಿಡ್‌–19 ಪಾಸಿಟೀವ್

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2020, 8:07 IST
Last Updated 25 ಆಗಸ್ಟ್ 2020, 8:07 IST
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌    

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಗೆ ಕೋವಿಡ್‌ ದೃಢಪಟ್ಟಿದೆ. ಹೀಗಾಗಿ, ಅವರು ಚಿಕಿತ್ಸೆಗಾಗಿ ರಾಜಾಜಿನಗರದಲ್ಲಿರುವ ಸುಗುಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಂಗಳವಾರ ಬೆಳಿಗ್ಗೆ ಅವರು ಸುಗುಣ ಆಸ್ಪತ್ರೆಗೆ ತೆರಳಿ ಕೋವಿಡ್‌ ತಪಾಸಣೆಗೆ ಒಳಗಾಗಿದ್ದರು. ಈ ವೇಳೆ ಪಾಸಿಟಿವ್‌ ವರದಿ ಬಂದಿದ್ದು, ಹೀಗಾಗಿ ಅದೇ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ಶಿವಕುಮಾರ್‌ ಅವರ ಆಪ್ತ ಮೂಲಗಳು ತಿಳಿಸಿವೆ.

ಸೋಮವಾರದಿಂದ (ಆ.25) ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ಭೇಟಿಗೆ ತೆರಳಲು ಶಿವಕುಮಾರ್‌ ನಿರ್ಧರಿಸಿದ್ದರು. ಕೆಲವು ದಿನಗಳಿಂದ ಅವರು ತೀವ್ರ ಬೆನ್ನು ನೋವಿನ ಬಳಲುತ್ತಿದ್ದರು. ಹೀಗಾಗಿ, ಪ್ರವಾಸ ಮುಂದೂಡಿ, ಸದಾಶಿವನಗರದಲ್ಲಿರುವ ತಮ್ಮ ಮನೆಯಲ್ಲಿ ವಿಶ್ರಾಂತಿಯಲ್ಲಿ ಪಡೆಯುತ್ತಿದ್ದರು.

ADVERTISEMENT

ಇದಕ್ಕೂ ಹಿಂದೆ ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರಿಗೆ ಕೊರೊನಾ ವೈರಸ್‌ ಸೋಂಕು ತಗುಲಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಅವರು ಗುಣಮುಖರಾಗಿದ್ದರು.

ಕುಮಾರಸ್ವಾಮಿ ಟ್ವೀಟ್‌

ವಿಷಯ ತಿಳಿಯುತ್ತಲೇ ಟ್ವೀಟ್‌ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ‘ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್‌ ಅವರಿಗೆ ಕೋವಿಡ್‌ ಇರುವುದಾಗಿ ತಿಳಿಯಿತು. ಕೊರೊನಾ ವೈರಸ್‌ ಸೋಂಕಿನಿಂದ ಅವರು ಶೀಘ್ರ ಗುಣಮುಖರಾಗಲಿ ಎಂದು ನಾನು ಹಾರೈಸುತ್ತೇನೆ,’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.