ಬೆಂಗಳೂರು: ‘ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹಿಂದೆ ಜಾತಿ ರಾಜಕಾರಣವನ್ನೇ ಮಾಡುತ್ತಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಈಗ ಅದನ್ನೇ ಮಾಡುತ್ತಿದ್ದಾರೆ’ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಸೋಮವಾರ ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಇಷ್ಟರವರೆಗೆ ದೇವೇಗೌಡರು ಜಾತಿಯನ್ನೇ ಹಿಡಿದು ರಾಜಕಾರಣ ಮಾಡುತ್ತಿದ್ದರು. ಈಗ ಶಿವಕುಮಾರ್ ಮುಂದೆ ಬಂದು ಅದೇ ಕೆಲಸ ಮಾಡುತ್ತಿದ್ದಾರೆ. ಈಗ ನಡೆಯುತ್ತಿರುವ ಉಪ ಚುನಾವಣೆ ಜಾತಿ ರಾಜಕಾರಣ ಮತ್ತು ಶಿವಕುಮಾರ್ ರಾಜಕೀಯ ಭವಿಷ್ಯ ಎರಡಕ್ಕೂ ಇತಿಶ್ರೀ ಹಾಡಲಿದೆ’ ಎಂದರು.
ಕಾಂಗ್ರೆಸ್‌ನಲ್ಲಿ ಈಗಾಗಲೇ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಆರಂಭವಾಗಿದೆ. ಸಮಯಸಾಧಕ ರಾಜಕಾರಣಕ್ಕೆ ಇದು ಉತ್ತಮ ಉದಾಹರಣೆ. ಕಾಂಗ್ರೆಸ್‌ನ 15 ಶಾಸಕರು ಅಲ್ಲಿನ ವಾತಾವರಣ ಸರಿ ಇಲ್ಲ ಎಂದು ಬಿಜೆಪಿಗೆ ಬಂದಿದ್ದಾರೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.