ADVERTISEMENT

ರಾಜ್ಯಸಭೆ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ವೀರೇಂದ್ರ ಹೆಗ್ಗಡೆ

ಡಿ. ವೀರೇಂದ್ರ ಹೆಗ್ಗಡೆ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿತ್ತು.

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಜುಲೈ 2022, 7:33 IST
Last Updated 21 ಜುಲೈ 2022, 7:33 IST
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ   

ಬೆಂಗಳೂರು: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆಯ ಸದಸ್ಯರಾಗಿ ಗುರುವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.

ದೇವರ ಹೆಸರಿನಲ್ಲಿ ಕನ್ನಡದಲ್ಲೇ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಡಿ. ವೀರೇಂದ್ರ ಹೆಗ್ಗಡೆ, ಸಂಗೀತ ನಿರ್ದೇಶಕ ಇಳಯರಾಜ, ಅಥ್ಲೀಟ್ ಪಿ. ಟಿ. ಉಷಾ ಮತ್ತು ಚಲನಚಿತ್ರ ಕಥೆ–ಸಂಭಾಷಣೆಗಾರ ವಿಜಯೇಂದ್ರ ಪ್ರಸಾದ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿತ್ತು.

ADVERTISEMENT

ಸಂಸತ್‌ನ ಮುಂಗಾರು ಅಧಿವೇಶನ ಸೋಮವಾರ ಆರಂಭವಾಗಿದೆ. ಬುಧವಾರ ದೆಹಲಿಗೆ ತೆರಳಿರುವ ಹೆಗ್ಗಡೆ, ಗುರುವಾರ ಕಲಾಪಕ್ಕೆ ಹಾಜರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.