ಬೆಂಗಳೂರು: 24 ಗಂಟೆಗಳಲ್ಲಿ ರಾಜ್ಯದಲ್ಲಿ 47,754 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಬೆಂಗಳೂರು ನಗರವೊಂದರಲ್ಲೇ ಒಂದೇ ದಿನ 30,540 ಪ್ರಕರಣಗಳು ದಾಖಲಾಗಿವೆ.
ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇಕಡ18.48ಕ್ಕೆ ಏರಿಕೆಯಾಗಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 2,93,231 (ಬೆಂಗಳೂರಲ್ಲಿ 2 ಲಕ್ಷ)ಕ್ಕೆ ಜಿಗಿದಿದೆ.
ಬೆಂಗಳೂರಲ್ಲಿ 8 ಮಂದಿ ಸೇರಿ ರಾಜ್ಯದಲ್ಲಿ ಒಂದೇ ದಿನ 29 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.
ಇಂದು 2,58,290 ಮಾದರಿಗಳಪರೀಕ್ಷೆ ನಡೆಸಲಾಗಿದ್ದು, 22,143 ಮಂದಿ ಸೋಂಕಿತರು ಚೇತರಿಸಿಕೊಂಡಿದ್ದಾರೆ.
ಮಂಡ್ಯದಲ್ಲಿ 1512, ಹಾಸನದಲ್ಲಿ1840, ತುಮಕೂರಿನಲ್ಲಿ 1622, ಮೈಸೂರಿನಲ್ಲಿ 1352 ಪ್ರಕರಣಗಳು ದೃಢಪಟ್ಟಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.