ಮಂಗಳೂರು ನಗರದಲ್ಲಿ ಸುರಿದ ಭಾರಿ ಮಳೆ
ಬೆಂಗಳೂರು: ಇದೇ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿ ಮತ್ತು ಪ್ರವಾಹದಿಂದ ಹಾನಿಯಾದ ಮನೆ ಮತ್ತು ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಜಿಲ್ಲಾಧಿಕಾರಿಗಳ ಪಿ.ಡಿ ಖಾತೆಯಿಂದ ಪರಿಹಾರ ಪಾವತಿಸಲು ಕಂದಾಯ ಇಲಾಖೆ ಆದೇಶ ಹೊರಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ ತಿಂಗಳಲ್ಲಿ ಮುಂಗಾರು ಪೂರ್ವ ಮಳೆ 166 ಮಿ.ಮೀ ಗೆ ಬದಲಾಗಿ 944 ಮಿ.ಮೀ ಮಳೆಯಾಗಿದೆ. ಅಲ್ಲದೇ ಮುಂಗಾರು ಮೇ ತಿಂಗಳಲ್ಲೇ ಆರಂಭವಾಗಿದೆ. ಇದರಿಂದ ಜಿಲ್ಲೆಯಾದ್ಯಂತ ಪ್ರವಾಹ, ಭೂಕುಸಿತ ಉಂಟಾಗಿದೆ. ಇದರಿಂದ ಜೀವ ಹಾನಿ, ಮನೆಗಳಿಗೆ ಹಾನಿ ಮತ್ತು ಜಾನುವಾರುಗಳು ಸಾವನ್ನಪಿವೆ. ಹೆಚ್ಚುವರಿ ಪರಿಹಾರ ಕಲ್ಪಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮನವಿ ಸಲ್ಲಿಸಿದ್ದಾರೆ. ಇದಕ್ಕೆ ಕಂದಾಯ ಇಲಾಖೆ ಒಪ್ಪಿಗೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.