ಮಂಗಳೂರು: ‘ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್‌ಗೆ ನಾನೂ ಆಕಾಂಕ್ಷಿಯಾಗಿದ್ದು, ಇನ್ನೆರಡು ದಿನದಲ್ಲಿ ದೆಹಲಿಗೆ ತೆರಳಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ಕಾಂಗ್ರೆಸ್ ಮುಖಂಡರನ್ನು ಭೇಟಿ ಮಾಡಲಿದ್ದೇನೆ’ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಹೇಳಿದರು.
‘ಕ್ಷೇತ್ರದಲ್ಲಿ 4–5 ಲಕ್ಷ ಬಿಲ್ಲವರಿದ್ದಾರೆ. ಬಿಲ್ಲವರ ಕೋಟಾದಲ್ಲಿ ವಿನಯಕುಮಾರ್ ಸೊರಕೆ, ಬಿ.ಕೆ. ಹರಿಪ್ರಸಾದ್ ಆಕಾಂಕ್ಷಿಗಳಾಗಿದ್ದಾರೆ. ಟಿಕೆಟ್ ಸಿಕ್ಕಲ್ಲಿ ನಾನು ಸ್ಪರ್ಧಿಸುವುದು ಖಚಿತ’ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.