ADVERTISEMENT

ದಕ್ಷಿಣ ಕನ್ನಡ: ಧಾರಾಕಾರ ಮಳೆ‌

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2020, 21:56 IST
Last Updated 13 ನವೆಂಬರ್ 2020, 21:56 IST
ಮಳೆ-ಪ್ರಾತಿನಿಧಿಕ ಚಿತ್ರ
ಮಳೆ-ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಶುಕ್ರವಾರ ಸಂಜೆ ಧಾರಾಕಾರ ಮಳೆ ಸುರಿದಿದ್ದು, ತುಮಕೂರು, ಮೈಸೂರು ಸೇರಿದಂತೆ ಇತರ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ಸಮೀಪದ ಬಿಳಿನೆಲೆ ಭಾಗದಲ್ಲಿ ಭಾರಿ ಗಾಳಿಯೊಂದಿಗೆ ಧಾರಾಕಾರ ಮಳೆ ಸುರಿದಿದೆ. ಸುಬ್ರಹ್ಮಣ್ಯ-ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ರಸ್ತೆಗೆ ಅಡ್ಡವಾಗಿ ಮರ ಬಿದ್ದು ಕೆಲಕಾಲ ಸಂಚಾರ ಸ್ಥಗಿತಗೊಂಡಿತು. ನಂತರ ಮರ ತೆರವು ಮಾಡಿ, ಸಂಚಾರಕ್ಕೆ ಅವಕಾಶ ನೀಡಲಾಯಿತು.

ಐತ್ತೂರು, ನೆಟ್ಟಣ ಬಿಳಿನೆಲೆ ಪರಿಸರದಲ್ಲಿ ಗಾಳಿಯ ರಭಸಕ್ಕೆ ಮರಗಳು ವಿದ್ಯುತ್‌ ತಂತಿಯ ಮೇಲೆ ಉರುಳಿ ಬಿದ್ದಿವೆ. ಸುಂಕದಕಟ್ಟೆ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನದ ಮೇಲೆ ಮರದ ಕೊಂಬೆ ಬಿದ್ದು, ವಾಹನಕ್ಕೆ ಹಾನಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರದಲ್ಲಿ ಶುಕ್ರವಾರ ಸಂಜೆ ದಿಢೀರನೆ ಮಳೆ ಸುರಿದಿದೆ.

ADVERTISEMENT

ತುಮಕೂರು ನಗರ ಸೇರಿದಂತೆ ಜಿಲ್ಲೆಯ ಕೆಲವು ಭಾಗಗಳಲ್ಲಿ ಶುಕ್ರವಾರ ಸೋನೆ ಮಳೆ ಸುರಿಯಿತು. ಜಿಲ್ಲೆಯ ತಿಪಟೂರು, ಕೊರಟಗೆರೆ ತಾಲ್ಲೂಕಿನ ತೋವಿನಕೆರೆ ಮತ್ತು ಗುಬ್ಬಿ ತಾಲ್ಲೂಕಿನ ಚೇಳೂರು ಭಾಗದಲ್ಲಿ ಉತ್ತಮ ಮಳೆಯಾಗಿದೆ. ಮಧುಗಿರಿ ಪಟ್ಟಣ ಹಾಗೂ ಸುತ್ತಮುತ್ತ, ಕೊಡಿಗೇನಹಳ್ಳಿ, ತುಮಕೂರು ತಾಲ್ಲೂಕಿನ ಕೋರಾ, ಹೆಬ್ಬೂರು ಹೋಬಳಿ ವ್ಯಾಪ್ತಿಯಲ್ಲಿ ಜಡಿ ಮಳೆ ಸುರಿಯಿತು. ಮೈಸೂರು, ಕೊಡಗು, ಹಾಸನ, ಮಂಡ್ಯ, ಕೊಡಗು, ಚಾಮರಾಜನಗರ, ಬೆಂಗಳೂರು ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗಿದೆ. ಹೊಸಪೇಟೆಯಲ್ಲಿ ತುಂತುರು ಮಳೆಯಾಗಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.