ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಡೆಯುವ ರಾಜ್ಯ ಮಟ್ಟದ ಪ್ರಥಮ ದಲಿತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕವಿ, ರಾಜ್ಯಸಭಾ ಸದಸ್ಯ ಡಾ. ಎಲ್. ಹನುಮಂತಯ್ಯ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಅಧ್ಯಕ್ಷತೆಯ ಸಮ್ಮೇಳನ ಸಮಿತಿಯು ಸರ್ವಾನುಮತದಿಂದ ಹನುಮಂತಯ್ಯ ಅವರನ್ನು ಆಯ್ಕೆ ಮಾಡಿದೆ.ಆಗಸ್ಟ್ 17 ಹಾಗೂ 18 ರಂದು ಕೋಲಾರದಲ್ಲಿ ಈ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.