ADVERTISEMENT

ದರ್ಶನ್‌ ಪ್ರಕರಣ: 21ರಂದು ಅಂತಿಮ ವಿಚಾರಣೆ

​ಪ್ರಜಾವಾಣಿ ವಾರ್ತೆ
Published 14 ಮೇ 2025, 22:30 IST
Last Updated 14 ಮೇ 2025, 22:30 IST
<div class="paragraphs"><p>ದರ್ಶನ್‌ ಪ್ರಕರಣ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್‌</p></div>

ದರ್ಶನ್‌ ಪ್ರಕರಣ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್‌

   

ನವದೆಹಲಿ: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಇತರೆ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿರುವ ಆದೇಶ ಪ್ರಶ್ನಿಸಿ‌ ಬೆಂಗಳೂರು ನಗರ ಪೊಲೀಸರು ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ಅಂತಿಮ ವಿಚಾರಣೆಯನ್ನು ಇದೇ 21ರಂದು ಸುಪ್ರೀಂ ಕೋರ್ಟ್‌ ನಡೆಸಲಿದೆ. 

ಮೇಲ್ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದಿವಾಲಾ ಹಾಗೂ ಆರ್‌.ಮಹದೇವನ್‌ ಪೀಠವು ಬುಧವಾರ ನಡೆಸಬೇಕಿತ್ತು. ಇದೇ 21ರಂದು ವಿಚಾರಣೆ ನಡೆಸಬೇಕು ಎಂದು ರಾಜ್ಯ ಸರ್ಕಾರದ ಪರ ವಕೀಲರು ಮನವಿ ಮಾಡಿದರು. ಅದಕ್ಕೆ ಪೀಠ ಒಪ್ಪಿತು. 

ADVERTISEMENT

ದರ್ಶನ್, ಪವಿತ್ರಗೌಡ, ಲಕ್ಷ್ಮಣ್, ಪ್ರದೂಶ್, ನಾಗರಾಜು, ಅನುಕುಮಾರ್ ಹಾಗೂ ಜಗದೀಶ್ ಅವರಿಗೆ ಹೈಕೋರ್ಟ್ ನಿಯಮಿತ ಜಾಮೀನು ಮಂಜೂರು ಮಾಡಿತ್ತು. ಉಳಿದ ಹತ್ತು ಆರೋಪಿಗಳಿಗೆ ವಿಚಾರಣಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಈ ನಿಯಮಿತ ಜಾಮೀನು ಆದೇಶಗಳನ್ನು ಪ್ರಶ್ನಿಸಿ ವಕೀಲ ಅನಿಲ್ ನಿಶಾನಿ ಅರ್ಜಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.