ಮೈಸೂರು: ದಸರಾ ಮಹೋತ್ಸವದ ಉದ್ಘಾಟನೆ ಅ.17 ರಂದು ಬೆಳಿಗ್ಗೆ 7.45 ರಿಂದ 8.15ರೊಳಗಿನ ಶುಭಮುಹೂರ್ತದಲ್ಲಿ ಚಾಮುಂಡಿಬೆಟ್ಟದಲ್ಲಿ ನಡೆಯಲಿದೆ.
ಐವರು ಕೊರೊನಾ ಯೋಧರು ಪಾಲ್ಗೊಳ್ಳಲಿದ್ದು, ಅವರಲ್ಲಿ ಒಬ್ಬರು ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾಗವಹಿಸಲಿದ್ದಾರೆ.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ನೇತೃತ್ವದಲ್ಲಿ ಶನಿವಾರ ಇಲ್ಲಿ ನಡೆದ ದಸರಾ ಕಾರ್ಯಕಾರಿ ಸಮಿತಿಯ ಮೊದಲ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.
‘60 ವರ್ಷ ತುಂಬಿರುವ ಅರ್ಜುನ ಆನೆ ಬದಲಿಗೆ ಈ ಬಾರಿ ಅಭಿಮನ್ಯು ಆನೆ ಅಂಬಾರಿ ಹೊರಲಿದೆ. ಅರಮನೆ ಆವರಣದಲ್ಲೇ ನಡೆಯಲಿರುವ ಜಂಬೂಸವಾರಿಯಲ್ಲಿ ವಿಕ್ರಮ, ಗೋಪಿ, ಕಾವೇರಿ, ವಿಜಯಾ ಆನೆಗಳು ಪಾಲ್ಗೊಳ್ಳಲಿವೆ’ ಎಂದು ಸೋಮಶೇಖರ್ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.