ADVERTISEMENT

ನಾಡಹಬ್ಬ ದಸರಾ: ಮೈಸೂರಿಗೆ ಆಗಮಿಸಿದ ರಾಷ್ಟ್ರಪತಿ‌ ದ್ರೌಪದಿ ಮುರ್ಮು

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2022, 15:34 IST
Last Updated 26 ಸೆಪ್ಟೆಂಬರ್ 2022, 15:34 IST
ಮೈಸೂರು ಮಂಡಕಳ್ಳಿ‌ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ‌ ದ್ರೌಪದಿ ಮುರ್ಮು ಅವರನ್ನು ದಸರಾ ಉತ್ಸವ ಉದ್ಘಾಟನೆಗೆ  ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹಲೊತ್ ಹಾಗೂ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮೈಸೂರು ಮಂಡಕಳ್ಳಿ‌ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ‌ ದ್ರೌಪದಿ ಮುರ್ಮು ಅವರನ್ನು ದಸರಾ ಉತ್ಸವ ಉದ್ಘಾಟನೆಗೆ ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹಲೊತ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ಮೈಸೂರು: ಇಲ್ಲಿನಮಂಡಕಳ್ಳಿ‌ ವಿಮಾನ ನಿಲ್ದಾಣದಲ್ಲಿ ರಾಷ್ಟ್ರಪತಿ‌ ದ್ರೌಪದಿ ಮುರ್ಮು ಅವರನ್ನುರಾಜ್ಯಪಾಲ ಥಾವರ್ ಚಂದ್ ಗೆಹಲೊತ್ ಹಾಗೂಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು.

ದಸರಾ ಉತ್ಸವ ಉದ್ಘಾಟನೆಗೆ ಆಗಮಿಸಿರುವ ಮುರ್ಮು ಅವರನ್ನು ಸ್ವಾಗತಿಸಿ ಬರಮಾಡಿಕೊಂಡರು.

ಬೆಳಿಗ್ಗೆ 9.45ರಿಂದ 10.05ರೊಳಗೆ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ನಾಡಹಬ್ಬವನ್ನು ಉದ್ಘಾಟಿಸಲಿದ್ದಾರೆ.

ADVERTISEMENT

ರಾಜ್ಯಪಾಲ ಥಾವರಚಂದ್ ಗೆಹಲೋತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದಾರೆ. ಬಿಗಿ ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.