ADVERTISEMENT

ಹುಬ್ಬಳ್ಳಿ: ದಸರಾಕ್ಕೆ ವಿಶೇಷ ರೈಲುಗಳ ಸಂಚಾರ– ಮಾಹಿತಿ ಇಲ್ಲಿದೆ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2025, 5:33 IST
Last Updated 9 ಸೆಪ್ಟೆಂಬರ್ 2025, 5:33 IST
<div class="paragraphs"><p>‘ವಂದೇ ಭಾರತ್’ ಇಂಟರ್‌ಸಿಟಿ ಸೆಮಿ ಹೈಸ್ಪೀಡ್‌ ರೈಲು</p></div>

‘ವಂದೇ ಭಾರತ್’ ಇಂಟರ್‌ಸಿಟಿ ಸೆಮಿ ಹೈಸ್ಪೀಡ್‌ ರೈಲು

   

ಹುಬ್ಬಳ್ಳಿ: ದಸರಾ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ ನಿವಾರಿಸಲು ವಿಶೇಷ ರೈಲುಗಳನ್ನು ಓಡಿಸುವುದಾಗಿ ನೈರುತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

ಹುಬ್ಬಳ್ಳಿ – ಯಶವಂತಪುರ ಒನ್‌–ವೇ ಎಕ್ಸ್‌ಪ್ರೆಸ್ ಸ್ಪೆಷಲ್ (07379) ರೈಲು ಸೆ.30ರ ಮಧ್ಯಾಹ್ನ 12ಕ್ಕೆ ಹುಬ್ಬಳ್ಳಿಯಿಂದ ಹೊರಟು ರಾತ್ರಿ 8.15ಕ್ಕೆ ಯಶವಂತಪುರ ತಲುಪಲಿದೆ.

ADVERTISEMENT

ಯಶವಂತಪುರ-ವಿಜಯಪುರ-ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ಸ್ಪೆಷಲ್ (06277) ರೈಲು ಸೆ.30ರಂದು ರಾತ್ರಿ 9.50ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಿಗ್ಗೆ 9.30ಕ್ಕೆ ವಿಜಯಪುರ ತಲುಪಲಿದೆ. ಈ ರೈಲು (06278) ಅ.1ರಂದು ಸಂಜೆ 5.30ಕ್ಕೆ ವಿಜಯಪುರದಿಂದ ಹೊರಟು ಮರುದಿನ ಬೆಳಿಗ್ಗೆ 6.40ಕ್ಕೆ ಬೆಂಗಳೂರು ತಲುಪಲಿದೆ.

ಯಶವಂತಪುರ-ವಿಜಯಪುರ-ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್ ಸ್ಪೆಷಲ್ (06279) ರೈಲು ಅ.2ರಂದು ಸಂಜೆ 7.40ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಿಗ್ಗೆ 7.45ಕ್ಕೆ ವಿಜಯಪುರ ತಲುಪಲಿದೆ. ಈ ರೈಲು (06280) ಅ.3ರಂದು ಸಂಜೆ 5.30ಕ್ಕೆ ವಿಜಯಪುರದಿಂದ ಹೊರಟು ಮರುದಿನ ಬೆಳಿಗ್ಗೆ 8.10ಕ್ಕೆ ಬೆಂಗಳೂರು ತಲುಪಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.