ADVERTISEMENT

ದತ್ತಪೀಠ ವರದಿಗೆ ಒಪ್ಪಿಗೆ

​ಪ್ರಜಾವಾಣಿ ವಾರ್ತೆ
Published 1 ಜುಲೈ 2022, 21:24 IST
Last Updated 1 ಜುಲೈ 2022, 21:24 IST
   

ಬೆಂಗಳೂರು: ಬಾಬಾಬುಡನ್‌ಗಿರಿ ಗುರು ದತ್ತಾತ್ರೇಯ ಪೀಠದಲ್ಲಿ ಪಾದುಕೆಗಳಿಗೆ ಪೂಜೆ ಸಲ್ಲಿಸುವ ಸಂಬಂಧ ವರದಿ ನೀಡುವಂತೆ ಸರ್ಕಾರ ಹೈಕೋರ್ಟ್‌ಗೆ ಸೂಚನೆ ನೀಡಿತ್ತು. ಅದರ ಪ್ರಕಾರ ಸಂಪುಟ ಉಪಸಮಿತಿ ವರದಿ ಸಿದ್ಧಪಡಿಸಿದ್ದು, ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆಎಂದು ಮಾಧುಸ್ವಾಮಿ ಹೇಳಿದರು.

ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕಾಗಿರುವುದರಿಂದ, ವರದಿಯ ಮಾಹಿತಿಯನ್ನು ನೀಡಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದರು.

ದತ್ತ ಪಾದುಕೆಗಳಿಗೆ ಹಿಂದೂ ಅರ್ಚಕರಿಂದಲೇ ಪೂಜೆಗೆ ಅವಕಾಶ ನೀಡಬೇಕು ಎಂಬುದು ಹಿಂದೂ ಸಂಘಟನೆಗಳ ವಾದವಾಗಿತ್ತು. ಈ
ಸಂಬಂಧ ಸರ್ಕಾರ ಸಚಿವ ಸಂಪುಟ ಉಪಸಮಿತಿ ರಚಿಸಿತ್ತು. ಗಿರಿಯ ಗುಹೆಯೊಳಗಿರುವ ದತ್ತಾತ್ರೇಯ ಪಾದುಕೆಗಳಿಗೆ ಹಿಂದೂ ಅರ್ಚಕರಿಂದಲೇ ಪೂಜೆಗೆ ಅವಕಾಶ ನೀಡಲು ಉಪಸಮಿತಿ ಶಿಫಾರಸು ಮಾಡಿತ್ತು. ಇದು ವರದಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.