
ಫಲಿತಾಂಶ
ಸಂಗ್ರಹ ಚಿತ್ರ
ಬೆಂಗಳೂರು: ಎಂಜಿನಿಯರಿಂಗ್ ಎರಡನೇ ವರ್ಷಕ್ಕೆ ನೇರ ಪ್ರವೇಶ ಪಡೆಯಲು ಡಿಪ್ಲೊಮಾ ವಿದ್ಯಾರ್ಥಿಗಳಿಗೆ ನಡೆಸಿದ್ದ ಡಿಸಿಇಟಿ-2025 ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಂಗಳವಾರ ಪ್ರಕಟಿಸಿದೆ.
ಪ್ರತಿ ಎಂಜಿನಿಯರಿಂಗ್ ಕಾಲೇಜಿನಲ್ಲೂ ಡಿಸಿಇಟಿ ವಿದ್ಯಾರ್ಥಿಗಳಿಗಾಗಿ ಶೇ 10ರಷ್ಟು ಸೀಟು ಮೀಸಲಿರುತ್ತದೆ. ಪರೀಕ್ಷೆ ಬರೆದಿದ್ದ 20,346 ಅಭ್ಯರ್ಥಿಗಳಿಗೆ ಶ್ರೇಯಾಂಕ ನೀಡಲಾಗಿದ್ದು, ಸೀಟು ಲಭ್ಯತೆಯ ನಂತರ ಹಂಚಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಪ್ರಾಧಿಕಾರ ಹೇಳಿದೆ.
ಎಂಡಿಎಸ್: 30ರಿಂದ ದಾಖಲೆ ಪರಿಶೀಲನೆ
2025-26ನೇ ಸಾಲಿನ ಸ್ನಾತಕೋತ್ತರ ದಂತ ವೈದ್ಯಕೀಯ ಕೋರ್ಸ್ (ಎಂಡಿಎಸ್) ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜೂನ್ 29ರವರಗೆ ಅರ್ಜಿ ಸಲ್ಲಿಸಬಹುದು. ಶುಲ್ಕ ಪಾವತಿಸಲು 30 ಕೊನೆ ದಿನ. ಮೂಲ ದಾಖಲೆಗಳ ಪರಿಶೀಲನೆ ಜೂನ್ 30ರಿಂದ ನಡೆಯಲಿದೆ. ಮುಂಗಡ ದಿನಾಂಕ ನಿಗದಿಗೆ ಜೂನ್ 27ರಂದು ವೆಬ್‌ಸೈಟ್ ಲಿಂಕ್ ಬಿಡುಗಡೆ ಮಾಡಲಾಗುತ್ತದೆ ಎಂದು ಕೆಇಎ ಮಾಹಿತಿ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.